ಕಲಬುರಗಿ:ಈವರ್ಷದಲ್ಲಿ ಮುಂಗಾರು ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ಏಳನೇ ಹಂತದ ಪರಿಹಾರವನ್ನು ಜಿಲ್ಲಾಧಿಕಾರಿ ಯಶವಂತ ಗುರುಕರ್ ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯ 8,815 ರೈತರಿಗೆ 9.24 ಕೋಟಿ ರೂ. ಬೆಳೆ ಪರಿಹಾರಕ್ಕೆ ಅನುಮೋದನೆ ನೀಡಿದ್ದಾರೆ.
ಕಳೆದ ಜುಲೈ-ಆಗಸ್ಟ್ ತಿಂಗಳಿನಲ್ಲಿ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿ 1.70 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಯನ್ನು ಜಂಟಿ ಸಮೀಕ್ಷೆ ಮೂಲಕ ಅಂದಾಜಿಸಿ, ಬೆಳೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.