ಕಲಬುರಗಿ: ಮಹಾರಾಷ್ಟ್ರದಲ್ಲಿ ಭಾರಿ ಮಳೆ ಸುರಿಯುತ್ತಿರೋ ಹಿನ್ನೆಲೆಯಲ್ಲಿ ಅಲ್ಲಿನ ವೀರ್ ಜಲಾಶಯದಿಂದ ಭೀಮಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ.
ಮಹಾರಾಷ್ಟ್ರದಲ್ಲಿ ಭಾರಿ ಮಳೆ: ವೀರ್ನಿಂದ ಭೀಮಾ ನದಿಗೆ 40 ಸಾವಿರ ಕ್ಯೂಸೆಕ್ ನೀರು ರಿಲೀಸ್
ವೀರ್ ಡ್ಯಾಂನಿಂದ ಭೀಮಾ ನದಿಗೆ 40 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದ್ದು, ಇಂದು ನೀರು ಸೊನ್ನ ಬ್ಯಾರೇಜ್ ತಲುಪಿದೆ. ಇದರಿಂದಾಗಿ ಭೀಮಾ ನದಿ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದ್ದು, ನದಿ ಬಳಿ ತೆರಳದಿರುವಂತೆ ನದಿ ಪಾತ್ರದ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.
ವೀರ್ ಡ್ಯಾಂನಿಂದ ಭೀಮಾ ನದಿಗೆ 40 ಸಾವಿರ ಕ್ಯೂಸೆಕ್ ನೀರನ್ನು ಬಿಡಲಾಗಿದ್ದು, ಇಂದು ನೀರು ಸೊನ್ನ ಬ್ಯಾರೇಜ್ ತಲುಪಿದೆ. ಕಲಬುರಗಿಯ ಅಫಜಲಪುರ ತಾಲೂಕಿನಲ್ಲಿರೋ ಸೊನ್ನ ಬ್ಯಾರೇಜ್ಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಅಷ್ಟೇ ಪ್ರಮಾಣದ ನೀರನ್ನು ಬ್ಯಾರೇಜ್ನಿಂದ ಭೀಮಾ ನದಿಗೆ ಬಿಡಲಾಗುತ್ತಿದೆ. ಇದರಿಂದಾಗಿ ಭೀಮಾ ನದಿ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದ್ದು, ನದಿ ಬಳಿ ತೆರಳದಿರುವಂತೆ ನದಿ ಪಾತ್ರದ ಗ್ರಾಮಸ್ಥರಿಗೆ ಸೂಚನೆ ನೀಡಲಾಗಿದೆ.
ಅಫಜಲಪುರ, ಚಿತ್ತಾಪುರ, ಜೇವರ್ಗಿ ಹಾಗೂ ಸಿಂಧಗಿ ತಾಲೂಕಿನ ಜನತೆಗೆ ಮುನ್ನೆಚ್ಚರಿಕೆ ನೀಡಲಾಗಿದೆ. ನದಿ ಬಳಿ ತೆರಳದಿರುವಂತೆ ಭೀಮಾ ಲಿಫ್ಟ್ ಇರಿಗೇಷನ್ ಸ್ಕೀಂನ ಕಾರ್ಯನಿರ್ವಾಹಕ ಎಂಜಿನಿಯರ್ ಅಶೋಕ್ ಕಲಾಲ್ ಮನವಿ ಮಾಡಿದ್ದಾರೆ.