ಕಲಬುರಗಿ:ಜಿಲ್ಲೆಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಜಿಲ್ಲೆಯ 136 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಈ ಪೈಕಿ 27 ಸೂಕ್ಷ್ಮ ಮತ್ತು 2 ಅತಿ ಸೂಕ್ಷ್ಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 43,175 ವಿದ್ಯಾರ್ಥಿಗಳು ಇಂದು ಪರೀಕ್ಷೆ ಬರೆಯುತ್ತಿದ್ದಾರೆ.
ಕಲಬುರಗಿಯಲ್ಲಿ 43,175 ವಿದ್ಯಾರ್ಥಿಗಳಿಗೆ ಪರೀಕ್ಷೆ, ಜಿಲ್ಲಾಡಳಿತದಿಂದ ಕಟ್ಟೆಚ್ಚರ
ಕಲಬುರಗಿ ಜಿಲ್ಲೆಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದೆ. ಜಿಲ್ಲೆಯ 136 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಪರೀಕ್ಷಾ ಕೇಂದ್ರಗಳಲ್ಲಿ ವ್ಯಾಪಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋಣೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಒಂದು ಟೇಬಲ್‌ಗೆ ಒಬ್ಬ ವಿದ್ಯಾರ್ಥಿ ಮಾತ್ರ ಕುಳಿತುಕೊಳ್ಳುವಂತೆ ವ್ಯವಸ್ಥೆ ಮಾಡಲಾಗಿದೆ.
ಕೇಂದ್ರದ ಹೊರಗಡೆಯೂ ಸಾಮಾಜಿಕ ಅಂತರ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಕೇಂದ್ರದ ಮುಖ್ಯದ್ವಾರದಲ್ಲೇ ಸ್ಕ್ರೀನಿಂಗ್ ಮತ್ತು ಸ್ಯಾನಿಟೈಸಿಂಗ್ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ವಿದ್ಯಾರ್ಥಿಗಳಿಗೆ ಉಚಿತ ಮಾಸ್ಕ್ ವಿತರಣೆಗೆ ಕೂಡ ಮಾಡಲಾಗುತ್ತಿದೆ. ಕೇಂದ್ರದ ಸುತ್ತ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ. ರೋಗ ಲಕ್ಷಣ ಇರೋ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಎರಡು ಕೋಣೆಗಳ ವ್ಯವಸ್ಥೆ ಮಾಡಲಾಗಿದೆ.