ಕಲಬುರಗಿ:ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣದಲ್ಲಿ ಕಲಬುರಗಿ ಜಿಲ್ಲೆಗೆ 450 ಕೋಟಿ ಅನುದಾನ ನೀಡಬೇಕು ಎಂದು ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಕೇಂದ್ರದ ಅನುದಾನದಲ್ಲಿ ಕಲಬುರಗಿಗೆ 450 ಕೋಟಿ ರೂ. ನೀಡಿ: ಜೆಡಿಎಸ್ ಮುಖಂಡ ಆಗ್ರಹ - kalaburgi news
ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹಣದಲ್ಲಿ ಕಲಬುರಗಿ ಜಿಲ್ಲೆಗೆ 450 ಕೋಟಿ ಅನುದಾನ ನೀಡುಬೇಕು ಎಂದು ಜೆಡಿಎಸ್ ಮುಖಂಡ ಕೇದಾರಲಿಂಗಯ್ಯ ಹಿರೇಮಠ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಕೇದಾರಲಿಂಗಯ್ಯ ಹಿರೇಮಠ
ಸುದ್ದಿಗೋಷ್ಟಿಯಲ್ಲಿ ಕೇದಾರಲಿಂಗಯ್ಯ ಹಿರೇಮಠ
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಳೆದ ಎರಡು ಮೂರು ವರ್ಷಗಳಿಂದ ಕಲಬುರಗಿ ಜಿಲ್ಲೆ ಭೀಕರ ಬರಗಾಲಕ್ಕೆ ತುತ್ತಾಗಿದೆ. ರೈತರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಕಳೆದ ವರ್ಷ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಎಕರೆಗೆ 2700 ರೂಪಾಯಿಯಂತೆ ಸುಮಾರು 550 ಕೋಟಿ ನಷ್ಟ ಆಗಿದೆ ಎಂದು ಹೇಳಲಾಗಿದೆ. ಕಳೆದ ವರ್ಷದ ಬರದ ಹಣವನ್ನು ಕೇಂದ್ರ ಸರ್ಕಾರ ಈಗ ರಾಜ್ಯಕ್ಕೆ 1,029 ಕೋಟಿ ಬಿಡುಗಡೆ ಮಾಡಿದೆ. ಅದರಲ್ಲಿ ಜಿಲ್ಲೆಗೆ 450 ಕೋಟಿ ಅನುದಾನ ನೀಡುಬೇಕು ಎಂದು ಆಗ್ರಹಿಸಿದ್ದಾರೆ.