ಕಲಬುರಗಿ :ತೀವ್ರ ತರವಲ್ಲದ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ನಗರದ ಜಿಮ್ಸ್ ಸರ್ಕಲ್ ಬಳಿಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯವನ್ನು ಜಿಮ್ಸ್ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲಾಗಿದ್ದು, ಶುಕ್ರವಾರದಿಂದ ಕಾರ್ಯಾರಂಭ ಮಾಡಿದೆ.
500 ಹಾಸಿಗೆ ಸಾಮರ್ಥ್ಯದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಸದ್ಯ 50 ಬೆಡ್ಗಳು ಕಾರ್ಯ ನಿರ್ವಹಿಸುತ್ತಿವೆ. ಮುಂದೆ ರೋಗಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಲ್ಲಿ ಅದಕ್ಕನುಗುಣವಾಗಿ ಹಾಸಿಗೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ. ಒಟ್ಟು 36 ಆಕ್ಸಿಜನ್ ಸಾಂಧ್ರಕಗಳು ಇಲ್ಲಿ ಲಭ್ಯವಿದ್ದು, ಉಸಿರಾಟದ ಸಮಸ್ಯೆ ಇರುವ ರೋಗಿಗಳಿಗೆ ನೆರವಾಗಲಿದೆ. ಓರ್ವ ಫಾರ್ಮಾಸಿಸ್ಟ್ ಅನ್ನು ಕೂಡ ನಿಯೋಜಿಸಲಾಗಿದ್ದು, ಅಗತ್ಯ ಔಷಧಿಗಳು ಸ್ಥಳದಲ್ಲಿಯೇ ಲಭ್ಯವಿರಲಿವೆ.