ಕಲಬುರಗಿ: ಮಹಾಮಾರಿ ಕೊರೊನಾ ಕಲಬುರಗಿ ಜಿಲ್ಲೆಯನ್ನು ಬಿಡದೇ ಕಾಡುತ್ತಿದೆ. ಇಂದು ಮತ್ತೆ ಜಿಲ್ಲೆಯಲ್ಲಿ ಒಂದೇ ದಿನ 67 ಜನರಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 883ಕ್ಕೆ ಏರಿಕೆಯಾಗಿದೆ.
ಕೊರೊನಾ ಹಾಟ್ಸ್ಪಾಟ್ ಕಲಬುರಗಿಯಲ್ಲಿ ಇಂದು ಒಂದೇ ದಿನ 67 ಜನರಲ್ಲಿ ಸೋಂಕು ದೃಢ! - corona in Kalaburagi
ಕೊರೊನಾ ಹಾಟ್ಸ್ಪಾಟ್ ಆಗಿರುವ ಕಲಬುರಗಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 67 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರದಿಂದ ವಾಪಸಾದ ವಲಸಿಗರಿಂದಲೇ ಈ ಸಂಖ್ಯೆ ಹೆಚ್ಚಾಗುತ್ತಿದ್ದು, ಜಿಲ್ಲೆಯ ಜನರು ಆತಂಕದಲ್ಲಿ ದಿನ ದೂಡುತ್ತಿದ್ದಾರೆ.
ಸಾಂದರ್ಭಿಕ ಚಿತ್ರ
67 ಜನ ಸೋಂಕಿತರ ಪೈಕಿ 17 ಮಕ್ಕಳು, 28 ಮಹಿಳೆಯರು, 22 ಜನ ಷುರುಷರಾಗಿದ್ದಾರೆ. ಇಬ್ಬರನ್ನು ಹೊರತುಪಡಿಸಿದರೆ ಉಳಿದವರೆಲ್ಲರೂ ಮಹಾರಾಷ್ಟ್ರದಿಂದ ವಾಪಸಾದ ವಲಸಿಗರರಾಗಿದ್ದಾರೆ. ಇಂದು ಮತ್ತೆ ಜಿಲ್ಲೆಯಲ್ಲಿ 32 ಜನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.