ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಓರ್ವ ಮೃತಪಟ್ಟಿದ್ದು, 67 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಕಲಬುರಗಿ: ಇಂದು 67 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ - ಕಲಬುರಗಿ ಕೊರೊನಾ ಕೇಸ್ ಅಪ್ಡೇಟ್ ನ್ಯೂಸ್
ಕಲಬುರಗಿ ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 168 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 67 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ಕಲಬುರಗಿ
ಶಹಬಾದ ಪಟ್ಟಣದ 64 ವರ್ಷದ ವೃದ್ಧ ವ್ಯಕ್ತಿಯೊಬ್ಬರು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 299ಕ್ಕೆ ಏರಿಕೆಯಾಗಿದೆ. ಜೊತೆಗೆ ಒಟ್ಟು ಸೋಂಕಿತರ ಸಂಖ್ಯೆ 19,006 ಕ್ಕೆ ಏರಿಕೆಯಾಗಿದೆ.
ಇಂದು 168 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 17,719 ಕ್ಕೆ ಏರಿಕೆಯಾಗಿದೆ. ಮತ್ತು 988 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.