ಕಲಬುರಗಿ: ಜಿಲ್ಲಾದ್ಯಂತ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ನಗರದ ಡಿಎಆರ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕಲಬುರಗಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಜಿಲ್ಲಾಧಿಕಾರಿ ಚಾಲನೆ - Republic day celebration
ಕಲಬುರಗಿಯ ಡಿಎಆರ್ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶರತ್ ಬಿ. ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಕಲಬುರಗಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮ:ಜಿಲ್ಲಾಧಿಕಾರಿ ಚಾಲನೆ
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶರತ್ ಬಿ., ಕಲ್ಯಾಣ ಕರ್ನಾಟಕ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಇತ್ತೀಚೆಗಷ್ಟೇ ಕಲಬುರಗಿ ವಿಮಾನ ನಿಲ್ದಾಣ ಉದ್ಘಾಟನೆಯಾಗಿದೆ. ಈ ಭಾಗದ ಪ್ರಮುಖ ಬೆಳೆಯಾದ ತೊಗರಿಗೆ ಭೌಗೋಳಿಕ ಮಾನ್ಯತೆ ಕೂಡ ಲಭಿಸಿದೆ. ಫೆಬ್ರವರಿ ತಿಂಗಳಲ್ಲಿ ಮೂರು ದಶಕಗಳ ನಂತರ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ನಮ್ಮೆಲ್ಲರ ಹೆಮ್ಮೆ ಎಂದರು.
ಇದಕ್ಕೂ ಮುನ್ನ ಶಾಲಾ ಮಕ್ಕಳು ಸೇರಿದಂತೆ ಪೊಲೀಸ್ ತುಕಡಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು.