ಕಲಬುರಗಿ:ಮುಂಬರುವ ಫೆಬ್ರವರಿ 5 ರಿಂದ ಮೂರು ದಿನಗಳ ಕಾಲ ನಡೆಯಲಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಸಿದ್ಧತಾ ಸಭೆ ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಿತು.
85ನೇ ಕನ್ನಡ ಸಾಹಿತ್ಯ ಸಮ್ಮೇಳನ.. ಇಂದು ಕಲಬುರಗಿಯಲ್ಲಿ ಪೂರ್ವ ಸಿದ್ಧತಾ ಸಭೆ.. - ಫೆಬ್ರವರಿ 5 ರಿಂದ ಮೂರು ದಿನಗಳ ಕಾಲ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ
ಫೆಬ್ರವರಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದೆ. ಇಂದು ಕಲಬುರಗಿ ನಗರದಲ್ಲಿ ಈ ಕುರಿತು ಪೂರ್ವ ಸಿದ್ಧತಾ ಸಭೆ ನಡೆಯಿತು.
ಈ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ವಹಿಸಿದ್ದರು. ಸಭೆಯಲ್ಲಿ ಭಾಗಿಯಾದ ಹಿರಿಯ ಸಾಹಿತಿಗಳು, ಸಾಹಿತ್ಯಾಸಕ್ತರು ಸಮ್ಮೇಳನದ ಯಶಸ್ಸಿನ ಕುರಿತು ಚರ್ಚಿಸಿ, ಗೋಷ್ಠಿಗಳಲ್ಲಿ ಇರಬೇಕಾದ ವಿಷಯದ ಕುರಿತು ಸಲಹೆ ನೀಡಿದರು.
ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಾಹಿತಿಗಳ ಕಡೆಗಣನೆ ಮಾಡಲಾಗಿದೆ ಎಂದು ಕೆಲ ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮನು ಬಳಿಗಾರ, ಸರ್ವಾನುಮತದ ನಿರ್ಣಯದಿಂದ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಮಾಡಲಾಗಿದೆ. ಕೆಲವೊಬ್ಬರ ಅಪಸ್ಪರ ಸಹಜ. ಆದರೆ, ಎಚ್ ಎಸ್ ವೆಂಕಟೇಶಮೂರ್ತಿ ಅವರ ಆಯ್ಕೆಗೆ ಬಹುತೇಕರ ಮೆಚ್ಚುಗೆ ವ್ಯಕ್ತವಾಗಿದೆ ಎಂದರು.