ಕಲಬುರಗಿ:ಆ. 23 ರಿಂದ 9- 12ನೇ ತರಗತಿಯವರೆಗೆ ಶಾಲೆ ಪ್ರಾರಂಭ ಮಾಡಲು ತಿರ್ಮಾನಿಸಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಜಿಲ್ಲೆಯಲ್ಲಿ ಕೊರೊನಾ ಕಡಿಮೆಯಾಗಿದೆ.
ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಕೆಲ ಗಡಿ ತಾಲೂಕುಗಳಲ್ಲಿ ಮಾತ್ರ ಕೊರೊನಾ ಹೆಚ್ಚಾಗಿದೆ. ಹೀಗಾಗಿ ಆ. 23 ರಿಂದ 9 ರಿಂದ 12ನೇ ತರಗತಿಯವರೆಗೆ ಶಾಲೆ ಪ್ರಾರಂಭ ಮಾಡಲಾಗುವುದು. ಅದಕ್ಕೆ ಬೇಕಾದ ಸಿದ್ಧತೆಯನ್ನು ಅಧಿಕಾರಿಗಳು ಮಾಡಿಕೊಳ್ಳುತ್ತಿದ್ದಾರೆ ಎಂದರು.
ಶಾಲೆ ಪ್ರಾರಂಭಕ್ಕೆ ನಿಧಾನ ಮಾಡಿದರೆ ಮಕ್ಕಳ ಭವಿಷ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಶಾಲೆ ಇಲ್ಲದೇ ಇರೋದರಿಂದ ಬಾಲ ಕಾರ್ಮಿಕರಾಗಿ ಅನೇಕರು ದುಡಿಯುತ್ತಿದ್ದಾರೆ. ಹೀಗಾಗಿ ಸದ್ಯ ಶಾಲೆ ಆರಂಭಿಸುವ ನಿರ್ಧಾರ ಮಾಡಲಾಗಿದೆ. ಒಂದು ವಾರ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಹೆಚ್ಚಿನ ಪಾಲಕರು ಶಾಲೆ ಪ್ರಾರಂಭ ಮಾಡಲು ಸಮ್ಮತಿಸಿದ್ದಾರೆ. 9 ರಿಂದ 12ನೇ ತರಗತಿಯ ಫೀಡ್ಬ್ಯಾಕ್ ನೋಡಿಕೊಂಡು 1ರಿಂದ 8ನೇ ತರಗತಿವರೆಗಿನ ಶಾಲೆ ಪ್ರಾರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಓದಿ: ಇಂದಿರಾ ಕ್ಯಾಂಟೀನ್ಗೆ ಅಂಬೇಡ್ಕರ್ ಹೆಸರಿಡಲಿ : ನಳಿನ್ ಕುಮಾರ್ ಕಟೀಲ್
ಸರ್ಕಾರ ಎಲ್ಲ ಎಚ್ಚರಿಕೆ ವಹಿಸಿದೆ. ಹೀಗಾಗಿ ಪಾಲಕರು ಧೈರ್ಯದಿಂದ ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿ, ಆಫ್ಲೈನ್ ಜೊತೆ ಆನ್ಲೈನ್ ತರಗತಿಗಳು ಕೂಡಾ ಇರುತ್ತವೆ. ಇದೇ ವೇಳೆ ಶಿಕ್ಷಕರ ವರ್ಗಾವಣೆ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.