ಕಲಬುರಗಿ: ಆಟೋ ಪಲ್ಟಿಯಾಗಿ ಇಬ್ಬರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಕೋನಾಪುರ-ಮುಧೋಳ ರಸ್ತೆಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಇಬ್ಬರ ದುರ್ಮರಣ
ಸೇಡಂ ತಾಲೂಕಿನ ಕೋನಾಪುರ-ಮುಧೋಳ ರಸ್ತೆಯಲ್ಲಿ ಆಟೋ ಪಲ್ಟಿಯಾಗಿದೆ. ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಇಬ್ಬರ ದುರ್ಮರಣ
ಕೋನಾಪುರ ಗ್ರಾಮದ ಅನಿತಾ (33) ಹಾಗೂ ಮದನಾ ಗ್ರಾಮದ ನಿವಾಸಿ ಆಶಪ್ಪ (60) ಮೃತ ದುರ್ದೈವಿಗಳು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಗ್ಗಿನಲ್ಲಿ ಆಟೋ ಪಲ್ಟಿಯಾಗಿ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಮುಧೋಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರೀಶಿಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.