ಕಲಬುರಗಿ:ಮಾರಕಾಸ್ತ್ರಗಳಿಂದ ವ್ಯಕ್ತಿಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ಹೊರವಲಯದ ಹಾಗರಗಾ ಕ್ರಾಸ್ ಬಳಿ ನಡೆದಿದೆ.
ಅನೈತಿಕ ಸಂಬಂಧಕ್ಕೆ ಬ್ಲಾಕ್ ಮೇಲ್... ಹಣ ಕೊಡದಿದ್ದಕ್ಕೆ ಕೊಚ್ಚಿ ವ್ಯಕ್ತಿ ಕೊಲೆ - Check Bounce
ಮೆಹಬೂಬ್ ನಗರದ ನಿವಾಸಿಯಾಗಿರುವ ಮೊಹಮ್ಮದ್ ಜಾಕಿರ್ ಜಾನಿಮಿಯಾ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಹೊರವಲಯದ ಹಾಗರಗಾ ಕ್ರಾಸ್ ಬಳಿ ನಡೆದಿದೆ.
ಮೆಹಬೂಬ್ ನಗರದ ನಿವಾಸಿಯಾಗಿದ್ದ ಮೊಹಮ್ಮದ್ ಜಾಕಿರ್ ಜಾನಿಮಿಯಾ (48) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೆಸ್ಕಾಂನಲ್ಲಿ ಕೆಲಸ ಮಾಡುತ್ತಿದ್ದ ಮೊಹಮ್ಮದ್ ಜಾಕಿರ್, ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಬಗ್ಗೆ ಗೊತ್ತಾದ ಕೆಲವರು ಬ್ಲಾಕ್ ಮೇಲ್ ಮಾಡಿ ಹಣದ ಬೇಡಿಕೆ ಇಟ್ಟಿದ್ದರಂತೆ, ಆದ್ರೆ ಹಣದ ಬದಲಿಗೆ ಅವರಿಗೆ ಮೊಹಮ್ಮದ ಜಾಕಿರ್ ಚೆಕ್ ನೀಡಿದ್ದ, ಚೆಕ್ ಬೌನ್ಸ್ ಆದ ಹಿನ್ನೆಲೆಯಲ್ಲಿ ಮಾತನಾಡುವುದಿದೆ ಬಾ ಎಂದು ಕರೆದುಕೊಂಡು ಹೋಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆಂದು ತಿಳಿದುಬಂದಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.