ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಹತ್ಯೆ - ಕಲಬುರಗಿ ವ್ಯಕ್ತಿಯ ಹತ್ಯೆ ಸುದ್ದಿ

ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿಯ ಹೊರವಲಯದ ಪೀರ್ ಬಂಗಾಲಿ ದರ್ಗಾ ಪ್ರದೇಶದಲ್ಲಿ ನಡೆದಿದೆ.

kalburagi
ಹತ್ಯೆಯಾದ ವ್ಯಕ್ತಿ

By

Published : Dec 29, 2019, 12:37 PM IST

ಕಲಬುರಗಿ: ಚಾಕುವಿನಿಂದ ಇರಿದು ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದ ಘಟನೆ ನಗರದ ಹೊರವಲಯದ ಪೀರ್ ಬಂಗಾಲಿ ದರ್ಗಾ ಪ್ರದೇಶದಲ್ಲಿ ನಡೆದಿದೆ.

ಚಾಕುವಿನಿಂದ ಇರಿದು ವ್ಯಕ್ತಿಯ ಬರ್ಬರ ಕೊಲೆ.

ಕೊಲೆಯಾದ ವ್ಯಕ್ತಿಯನ್ನು ಹನೀಫ್ ಖುರೇಶಿ (26) ಎಂದು ಗುರುತಿಸಲಾಗಿದ್ದು, ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈಯಲಾಗಿದೆ. ಹನೀಫ್ ಜಿಲ್ಲೆಯ ರಾಮಜಿ ನಗರದ ನಿವಾಸಿಯಾಗಿದ್ದು, ಮಟನ್ ಅಂಗಡಿ ಜೊತೆಗೆ ಆಟೋ ಚಲಾಯಿಸಿಕೊಂಡು ಜೀವನ ನಡೆಸುತ್ತಿದ್ದ. ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸ್ನೇಹಿತರಿಂದಲೇ ಈತನ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.

ABOUT THE AUTHOR

...view details