ಕರ್ನಾಟಕ

karnataka

ETV Bharat / state

ಹಲ್ಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ಹೋಗಿದ್ದ ಯುವಕ ಸಾವು - Youth dies after going to hospital for lizard surgery

ಹಲ್ಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಪ್ರಾಣ ಕಳೆದುಕೊಂಡ ಘಟನೆ ಕಲಬುರಗಿ ನಗರದಲ್ಲಿ ನಡೆದಿದೆ.

ಯುವಕ ಸಾವು
ಯುವಕ ಸಾವು

By

Published : Oct 6, 2021, 7:44 AM IST

Updated : Oct 6, 2021, 12:53 PM IST

ಕಲಬುರಗಿ: ಹಲ್ಲಿನ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾದ ಯುವಕ ಸಾವನ್ನಪ್ಪಿದ್ದಾನೆ. ಕಲಬುರಗಿಯ ಸಾಯಿ ಮಂದಿರ ಬಡಾವಣೆಯ ನಿವಾಸಿ ಶಶಾಂಕ್ ರಾಮದಾಸ್ (17) ಮೃತ ಯುವಕ.

ಶಶಾಂಕ್ ತನ್ನ ಹಲ್ಲುಗಳು ಮುಂದೆ ಬಂದಿವೆ ಎಂದು ಸೂಕ್ತ ಚಿಕಿತ್ಸೆಗಾಗಿ ವೈದ್ಯರನ್ನು ಸಂಪರ್ಕಿಸಿದ್ದಾನೆ. ಈ ವೇಳೆ ಅವರ ಸಲಹೆಯಂತೆ ಚಿಕ್ಕದೊಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸೆಪ್ಟೆಂಬರ್ 30 ರಂದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ. ಅಕ್ಬೋಬರ್‌ 1 ರಂದು ಶಸ್ತ್ರಚಿಕಿತ್ಸೆ ಮಾಡಲು ವೈದ್ಯರು ಅನಸ್ತೇಶಿಯಾ ನೀಡಿದ್ದಾರೆ. ಇದಾದ ಕೆಲ ಹೊತ್ತಿನಲ್ಲಿ ಶಶಾಂಕ್ ಕೋಮಾ ಸ್ಥಿತಿಗೆ ತಲುಪಿದ್ದಾನೆ ಎಂದು ಆತನ ಕುಟುಂಬಸ್ಥರು ಆರೋಪಿಸಿದ್ದಾರೆ.

ಖಾಸಗಿ ಆಸ್ಪತ್ರೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

ಕೋಮಾ ಸ್ಥಿತಿಯಲ್ಲಿದ್ದ ಆತ ಮೂರು ದಿನ ವೆಂಟಿಲೇಟರ್ ಸಹಾಯದಿಂದ ಉಸಿರಾಡಿದ್ದಾನೆ. ನಂತರ ಸಾವನ್ನಪ್ಪಿದ್ದು, ನಮ್ಮ ಮಗನ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಕುಟುಂಬಸ್ಥರು, ಆಸ್ಪತ್ರೆ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

Last Updated : Oct 6, 2021, 12:53 PM IST

ABOUT THE AUTHOR

...view details