ಕಲಬುರಗಿ:ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಹಿನ್ನೆಲೆ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮೇಲೆ ಪೊಲೀಸರು ಡ್ರೋಣ್ ಕ್ಯಾಮರಾದಿಂದ ಹದ್ದಿನ ಕಣ್ಣಿಟ್ಟಿದ್ದಾರೆ.
ಕಲಬುರಗಿಯಲ್ಲಿ ಪ್ರತಿಭಟನೆ... ಡ್ರೋನ್ ಕ್ಯಾಮೆರಾ ಬಳಸಿ ಹದ್ದಿನ ಕಣ್ಣಿಟ್ಟ ಪೊಲೀಸ್ ಇಲಾಖೆ....
ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರದ ಹಿನ್ನೆಲೆ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆ ಮೇಲೆ ಪೊಲೀಸರು ಡ್ರೋಣ್ ಕ್ಯಾಮರಾದಿಂದ ಹದ್ದಿನ ಕಣ್ಣಿಟ್ಟಿದ್ದಾರೆ.
ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಕಾರ್ಮಿಕ ಸಂಘಟನೆಗಳ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನೆ ನಡೆಸುವ ಸ್ಥಳದಲ್ಲಿ ಡ್ರೋಣ್ ಕಣ್ಗಾವಲು ಹಾಕಲಾಗಿದೆ. ಎಚ್.ಕೆ.ಆರ್.ಡಿ.ಬಿ ಅನುದಾನದಲ್ಲಿ ಆರು ಲಕ್ಷ ಮೌಲ್ಯದ ಎರಡು ಡ್ರೋಣ್ ಕ್ಯಾಮರಾ ಪೊಲೀಸ್ ಇಲಾಖೆಗೆ ನೀಡಲಾಗಿದ್ದು, ಅದರಲ್ಲಿ ಒಂದನ್ನು ಪ್ರತಿಭಟನೆ ಮೇಲೆ ಕಣ್ಣಿಡಲು ಬಳಸಿಕೊಳ್ಳಲಾಗಿದೆ. 500 ಮೀಟರ್ ಎತ್ತರ, ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಹಾರಾಡುವ ಸಾಮರ್ಥ್ಯವನ್ನ ಈ ಡ್ರೋಣ್ ಕ್ಯಾಮರಾ ಹೊಂದಿದೆ.
ಇನ್ನು ಪ್ರತಿಭಟನೆ ಹಿನ್ನೆಲೆ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಗಳನ್ನ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನೊಂದೆಡೆ ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುತ್ತಿದ್ದು, ಬೇರೆ ಸ್ಥಳಕ್ಕೆ ತೆರಳಬೇಕಾದ ವಿದ್ಯಾರ್ಥಿಗಳು, ನೌಕರರು, ವ್ಯಾಪಾರಸ್ಥರು ಪರದಾಡುವಂತಾಗಿದೆ.