ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆಗೈದ ಘಟನೆ ನಗರದ ರೋಜಾ ಪ್ರದೇಶದ ಭಾಯಂ ರಸ್ತೆಯಲ್ಲಿ ನಡೆದಿದೆ.
ಕಲಬುರಗಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ - kannadanews
ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ರೋಜಾ ಪ್ರದೇಶದ ಭಾಯಂ ರಸ್ತೆಯಲ್ಲಿ ನಡೆದಿದೆ.
ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಶಾರುಖ್(24) ಕೊಲೆಯಾದ ಯುವಕನೆಂದು ಗುರುತಿಸಲಾಗಿದೆ. ಹಣಕಾಸಿನ ವಿಚಾರಕ್ಕೆ ಆತನ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ರೋಜಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.