ಕಲಬುರಗಿ:ಸೆಲ್ಫಿ ತೆಗೆದುಕೊಳ್ಳಲು ಹೋಗಿ ಆಯತಪ್ಪಿ ಹಳ್ಳಕ್ಕೆ ಬಿದ್ದು ಯುವಕ ಮೃತಪಟ್ಟಿರುವ ಘಟನೆ ಅಫಜಲಪುರ ತಾಲೂಕಿನ ಬಿದನೂರುನಲ್ಲಿ ನಡೆದಿದೆ. ಕಲಬುರಗಿಯ ಬೋರಾಬಾಯಿ ನಗರ ನಿವಾಸಿ ಕಾಮಣ್ಣ (19) ಮೃತ ಯುವಕ.
ಶುಕ್ರವಾರ ಸಂಜೆ ಬಿದನೂರ ಗ್ರಾಮದ ಹೊರವಲಯದಲ್ಲಿರುವ ಹಳ್ಳದ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಹಳ್ಳದ ನೀರಿನಲ್ಲಿ ಬಿದ್ದಿದ್ದಾನೆಂದು ತಿಳಿದುಬಂದಿದೆ.
ಇಂದು ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಮಾರು ನಾಲ್ಕು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಮೃತದೇಹ ಹೊರತೆಗೆದಿದ್ದಾರೆ. ನಿನ್ನೆ ಘಟನೆ ನಡೆದ ತಕ್ಷಣ ಆಗಮಿಸಿ ರಕ್ಷಣೆ ಮಾಡಿದ್ರೆ ನಮ್ಮ ಮಗ ಉಳಿಯುತ್ತಿದ್ದನೆಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೃತದೇಹ ಹೊರ ತೆಗೆಯುತ್ತಿದ್ದಂತೆ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿತ್ತು. ಈ ಕುರಿತು ದೇವಲ ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹಳ್ಳದಲ್ಲಿ ಕೊಚ್ಚಿ ಹೋದ ರೈತ: ಈಜಲು ಹೋಗಿ ನೀರುಪಾಲಾದ ಯುವಕ