ಕಲಬುರಗಿ: ಜೇವರ್ಗಿ ಪಟ್ಟಣದಲ್ಲಿನ ಉದ್ಯಾನವನದಲ್ಲಿ ಅತಿಕ್ರಮವಾಗಿ ನಿರ್ಮಿಸಿರುವ ಅಕ್ರಮ ಕಟ್ಟಡಗಳ ತೆರವಿಗೆ ಆಗ್ರಹಿಸಿ ಕಲಬುರ್ಗಿಯಲ್ಲಿ ವಿನೂತನವಾಗಿ ಪ್ರತಿಭಟಿಸಲಾಯಿತು.
ಉದ್ಯಾನವನ ಅತಿಕ್ರಮ ಖಂಡಿಸಿ ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ - ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ
ಜೇವರ್ಗಿಯ 15 ಪಾರ್ಕ್ಗಳು ಒತ್ತುವರಿಯಾಗಿವೆ. ಆಮ್ ಆದ್ಮಿ ಪಕ್ಷದ ದೂರಿನ ಮೇರೆಗೆ ಪ್ರಾದೇಶಿಕ ಆಯುಕ್ತರು ನಡೆಸಿದ ತನಿಖೆಯ ವೇಳೆ ಇದು ಸಾಬೀತಾಗಿದೆ. ಆದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ತಲೆ ಮೇಲೆ ಕಲ್ಲು ಹೊತ್ತು ವಿನೂತನ ಪ್ರತಿಭಟನೆ ಮಾಡಲಾಯಿತು. ಜೇವರ್ಗಿಯ 15 ಪಾರ್ಕ್ಗಳು ಒತ್ತುವರಿಯಾಗಿವೆ. ಆಮ್ ಆದ್ಮಿ ಪಕ್ಷದ ದೂರಿನ ಮೇರೆಗೆ ಪ್ರಾದೇಶಿಕ ಆಯುಕ್ತರು ನಡೆಸಿದ ತನಿಖೆಯ ವೇಳೆ ಇದು ಸಾಬೀತಾಗಿದೆ. ಆದರೂ ಅಕ್ರಮ ಕಟ್ಟಡಗಳ ತೆರವುಗೊಳಿಸದೆ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೂಡಲೇ ಅಕ್ರಮ ಕಟ್ಟಡಗಳ ತೆರವಿಗೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದಲ್ಲಿ ಹೋರಾಟ ಮತ್ತಷ್ಟು ಉಗ್ರಗೊಳಿಸುವುದಾಗಿ ಎಎಪಿ ಜಿಲ್ಲಾಧ್ಯಕ್ಷ ಈರನಗೌಡ ಪಾಟೀಲ ಎಚ್ಚರಿಸಿದ್ದಾರೆ.