ಕರ್ನಾಟಕ

karnataka

ETV Bharat / state

ವಸತಿ ನಿಲಯದಲ್ಲಿ ಐವರು ವಿದ್ಯಾರ್ಥಿಗಳ ದಾರುಣ ಸಾವು, ಎಬಿವಿಪಿ ಪ್ರತಿಭಟನೆ - protest by ABVP

ಕೊಪ್ಪಳದ ದೇವರಾಜ ಅರಸು ವಸತಿ ನಿಲಯದಲ್ಲಿ ನಡೆದ ಐದು ಜನ ವಿದ್ಯಾರ್ಥಿಗಳ ದಾರುಣ ಸಾವು ಪ್ರಕರಣ ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ‌ ಪರಿಷತ್ ನೇತೃತ್ವದಲ್ಲಿ ಕಲಬುರ್ಗಿಯಲ್ಲಿ ಪ್ರತಿಭಟನೆ ನಡೆಯಿತು.

ಎಬಿವಿಪಿ ಪ್ರತಿಭಟನೆ

By

Published : Aug 21, 2019, 3:56 PM IST

ಕಲಬುರಗಿ:ಕೊಪ್ಪಳದ ದೇವರಾಜ ಅರಸು ವಸತಿ ನಿಲಯದಲ್ಲಿ ನಡೆದ ಐದು ಜನ ವಿದ್ಯಾರ್ಥಿಗಳ ದಾರುಣ ಸಾವು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ‌ ಪರಿಷತ್ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಯಿತು.

ಎಬಿವಿಪಿ ಪ್ರತಿಭಟನೆ

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮುಖಂಡರು ಮತ್ತು ವಿದ್ಯಾರ್ಥಿಗಳು, ವಸತಿ ನಿಲಯದ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿದರು.

ಘಟನೆಯ ಸಂಪೂರ್ಣ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು. ರಾಜ್ಯದ ಹಲವೆಡೆ ಸ್ವಂತ ಕಟ್ಟಡಗಳಿಲ್ಲದೆ ಬಾಡಿಗೆ ಕಟ್ಟಡಗಳಲ್ಲೆ ವಸತಿ ನಿಲಯಗಳು ಮುಂದುವರೆಯುತ್ತಿವೆ. ಸರ್ಕಾರ ಕೂಡಲೇ ಹಾಸ್ಟೆಲ್ ವ್ಯವಸ್ಥೆ ಸುಧಾರಣೆಗೆ ಮುಂದಾಗಬೇಕು. ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ABOUT THE AUTHOR

...view details