ಕರ್ನಾಟಕ

karnataka

ETV Bharat / state

ಸೇಡಂ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ - ಡಿವೈಎಸ್ಪಿ ಸುಧಾ ಆದಿ ನೇತೃತ್ವ

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕು ಉಪ ನೊಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ.

ಸೇಡಂ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ

By

Published : Sep 30, 2019, 11:34 PM IST

ಕಲಬುರಗಿ: ಸೇಡಂ ತಾಲೂಕು ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದು, ಸಿಬ್ಬಂದಿಯನ್ನು ವಿಚಾರಣೆ ನಡೆಸಿದ್ದಾರೆ.

ಕೆಲ ಅಧಿಕಾರಿಗಳು, ನೌಕರರು ಮತ್ತು ಮಧ್ಯವರ್ತಿಗಳು ಸೇರಿ ಕರ್ತವ್ಯಲೋಪ ಎಸಗಿದ ಬಗ್ಗೆ ಮತ್ತು ದಾಖಲೆ ತಿದ್ದುಪಡಿ ಮಾಡಿರುವ ಬಗ್ಗೆ ದೂರು ಬಂದಿರುವ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಸೇಡಂ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ದಾಳಿ
ಎಸಿಬಿ ಡಿವೈಎಸ್ಪಿ ಸುಧಾ ಆದಿ ನೇತೃತ್ವದ ಪಿಐ ಮಹ್ಮದ್ ಇಸ್ಮಾಯಿಲ್, ಕೃಷ್ಣ ಕಲದಳ್ಳಿ, ಶರಣಬಸಪ್ಪ ಕೋಡ್ಲಾ ಮತ್ತಿತರರಿದ್ದ ತಂಡ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸಿಬ್ಬಂದಿಯ ವಿಚಾರಣೆ ನಡೆಸಿದ್ದಾರೆ. ಉಪ ನೋಂದಣಾಧಿಕಾರಿ ಕಚೇರಿಯ ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕಿದ್ದಾರೆ.

ABOUT THE AUTHOR

...view details