ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಶಿಷ್ಯ ವೇತನ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ:  ಎಸಿಬಿ ದಾಳಿ - ACB attack on clerk

ಶಿಷ್ಯ ವೇತನ ಮಂಜೂರು ಮಾಡಲು ಹಣಕ್ಕೆ ಬೇಡಿಕೆ ಇಟ್ಟಿದ್ದ ದ್ವಿತೀಯ ದರ್ಜೆ ಸಹಾಯಕನೊಬ್ಬನ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ACB attack
ಹಣಕ್ಕೆ ಬೇಡಿಕೆ ಇಟ್ಟ ಅಧಿಕಾರಿ ಮೇಲೆ ಎಸಿಬಿ ದಾಳಿ

By

Published : May 18, 2020, 4:23 PM IST

ಕಲಬುರಗಿ: ನಗರದಲ್ಲಿ ಲಂಚ ಪಡೆಯುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ದ್ವಿತೀಯ ದರ್ಜೆ ಸಹಾಯಕನೊಬ್ಬ ಎಸಿಬಿ ಬಲೆಗೆ ಬಿದ್ದಿದ್ದಾರೆ. ವಿರೇಶ್ ಬಡಿಗೇರ ಎಸಿಬಿ ಬಲೆಗೆ ಬಿದ್ದ ದ್ವಿತೀಯ ದರ್ಜೆ ಸಹಾಯಕ.

ಮೋಹನದಾಸ್ MSW ಕಾಲೇಜಿನ ಕಾರ್ಯದರ್ಶಿ ಡಾ. ರಾಜಶೇಖರ್​​ ಅವರಿಂದ ಎರಡು ಸಾವಿರ ರೂಪಾಯಿಯನ್ನು ಕಚೇರಿಯಲ್ಲಿ ಲಂಚ ಪಡೆಯುತ್ತಿರುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

MSW ಕೋರ್ಸ್​ನ ಶಿಷ್ಯ ವೇತನ ನೀಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರಂತೆ. ತಲಾ ವಿದ್ಯಾರ್ಥಿಯ ಶಿಷ್ಯ ವೇತನಕ್ಕೆ 1 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಹಿನ್ನೆಲೆ ಎಸಿಬಿಗೆ ಡಾ. ರಾಜಶೇಖರ್​ ದೂರು ನೀಡಿದ್ದರು.

ಇಂದು ಕಚೇರಿಯಲ್ಲಿ ಹಣ ಪಡೆಯುವಾಗ ಎಸಿಬಿ ಡಿವೈಎಸ್​ಪಿ ಸುಧಾ ಆದಿ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

ABOUT THE AUTHOR

...view details