ಕಲಬುರಗಿ:ನಗರದ ಮಿನಿ ವಿಧಾನಸೌಧ ಕಟ್ಟಡದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಎಸ್ಪಿ ವಿ.ಎಮ್. ಜ್ಯೋತಿ ಅವರ ನೇತೃತ್ವದ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಕಲಬುರಗಿ ಸಬ್ ರಿಜಿಸ್ಟರ್ ಕಚೇರಿ ಮೇಲೆ ಎಸಿಬಿ ದಾಳಿ.. ಅಧಿಕಾರಿ ಕಾರಿನಲ್ಲಿ ನಗದು ಹಣ ಪತ್ತೆ.. - kalaburagi
ಕಲಬುರಗಿ ಉಪ ನೋಂದಣಾಧಿಕಾರಿ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ಧಿಡೀರ್ ದಾಳಿ ನಡೆಸುವ ಮೂಲಕ ಭ್ರಷ್ಟರಿಗೆ ಚುರುಕು ಮುಟ್ಟಿಸಿದ್ದಾರೆ.
ಅಧಿಕಾರಿ ಕಾರಿನಲ್ಲಿ ನಗದು ಹಣ ಪತ್ತೆ..
ಕಾರಿನಲ್ಲಿ ಸುಮಾರು 60 ಸಾವಿರ ರೂಪಾಯಿ ನಗದು ಪತ್ತೆ
ನೋಂದಣಾಧಿಕಾರಿ ಕಚೇರಿಯಲ್ಲಿ ಭಾರಿ ಅವ್ಯವಹಾರ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ. ದಾಳಿ ವೇಳೆ ಕಚೇರಿ ಒಳಗಿದ್ದ ಪ್ರತಿಯೊಬ್ಬರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆದಿದೆ.
ಇನ್ನು ಇದೇ ವೇಳೆ ಉಪ ನೋಂದಣಾಧಿಕಾರಿ ಎ. ಹಸೀಬ್ ಅವರ ಕಾರು ಪರಿಶೀಲನೆಗೆ ಒಳಪಡಿಸಲಾಗಿದ್ದು, ಕಾರಿನಲ್ಲಿ ಸುಮಾರು 60 ಸಾವಿರ ರೂಪಾಯಿ ನಗದು ಪತ್ತೆ ಆಗಿದೆ. ಕಚೇರಿಯಲ್ಲಿಯೂ ನಗದು ಹಣ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಧಿಕಾರಿಗಳು ಪರಿಶೀಲನೆ ಕಾರ್ಯ ಮುಂದುವರಿಸಿದ್ದಾರೆ.
TAGGED:
kalaburagi