ಕಲಬುರಗಿ:ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಾಯಗೊಂಡಿರುವ ಘಟನೆ ಆಳಂದ ತಾಲೂಕಿನ ಡೋಗಿನಾಲಾ ಬಳಿ ನಡೆದಿದೆ.
ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಓರ್ವ ಸಾವು, ಇಬ್ಬರಿಗೆ ಗಾಯ - ಓರ್ವ ಸಾವು
ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಆಳಂದ ತಾಲೂಕಿನ ಡೋಗಿನಾಲಾ ಬಳಿ ನಡೆದಿದೆ.
ಲಾರಿಗೆ ಕಾರು ಡಿಕ್ಕಿ
ಮೃತ ವ್ಯಕ್ತಿ ಮಹಾರಾಷ್ಟ್ರದ ನಾಸಿಕ್ ಜಿಲ್ಲೆ ದೇವಗಡ್ ಮೂಲದ ಅಮಿತ್ ಎಂದು ತಿಳಿದುಬಂದಿದೆ.
ಮೂವರು ಸೇರಿ ಕಾರಿನಲ್ಲಿ ಬರುತ್ತಿದ್ದಾಗ ಡೊಗಿನಾಲಾ ಬಳಿ ಕಾರು ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಗಾಯಾಳುಗಳಿಗೆ ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆ ನಂತರ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದಾನೆ. ಈ ಕುರಿತು ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ತನಿಖೆ ಕೈಗೊಂಡಿದ್ದಾರೆ.