ಕಲಬುರಗಿ: ಮನೆಯಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಆಳಂದ ಪಟ್ಟಣದ ಶರಣ ನಗರದಲ್ಲಿ ನಡೆದಿದೆ.
ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಅಪಾರ ಹಾನಿ - Accidental power short circuit
ಆಳಂದ ಪಟ್ಟಣದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು ಅವಘಡದಲ್ಲಿ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.
ವಿದ್ಯುತ್ ಶಾರ್ಟ್ ಸರ್ಕ್ಯೂಟ್
ಆಕಸ್ಮಿಕವಾಗಿ ಮನೆಯಲ್ಲಿ ಹೊತ್ತಿಕೊಂಡ ಬೆಂಕಿ ಇಡೀ ಮನೆಗೆ ವ್ಯಾಪಿಸಿ, ಲಕ್ಷಾಂತರ ರೂ. ಮೌಲ್ಯದ ವಸ್ತು ಸುಟ್ಟು ಹೋಗಿವೆ. ಲ್ಯಾಪ್ ಟಾಪ್, ಎಲ್.ಇ.ಡಿ. ಟಿವಿ, ದವಸ-ಧಾನ್ಯ ನಾಶವಾಗಿವೆ. ಅಂದಾಜು ಸುಮಾರು 2 ಲಕ್ಷ ರೂ. ಮೌಲ್ಯದ ಆಸ್ತಿ ಹಾನಿಯಾಗಿದೆ.
ದತ್ತಾತ್ರೇಯ ಬಾಬರೆ ಎಂಬುವರಿಗೆ ಸೇರಿದ ಮನೆಯಲ್ಲಿ ಘಟನೆ ಸಂಭವಿಸಿದೆ. ಬೆಂಕಿ ನಂದಿಸುವಲ್ಲಿ ಅಗ್ನಿ ಶಾಮಕ ದಳ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.