ಕಲಬುರಗಿ: ರಾಜಕೀಯ ಪಕ್ಷಗಳು ಬಂಡವಾಳ ಶಾಹಿಗಳ ಕಪಿಮುಷ್ಟಿಯಲ್ಲಿ ಕೆಲಸ ಮಾಡುತ್ತಿವೆ ಎಂದು ಎಐಡಿವೈಒ ರಾಜ್ಯಾಧ್ಯಕ್ಷೆ ಎಂ.ಉಮಾದೇವಿ ಹೇಳಿದರು.
ಕಲಬುರಗಿಯಲ್ಲಿ ಆರ್ಥಿಕ ಬಿಕ್ಕಟ್ಟು ಕುರಿತು ಸಂವಾದ ಕಾರ್ಯಕ್ರಮ - ದೇಶದ ಆರ್ಥಿಕ ನೀತಿಗೆ ಪ್ರಸ್ತುತ ಕೇಂದ್ರ ಸರ್ಕಾರದ ನೀತಿ
ಕಲಬುರಗಿಯ ಕನ್ನಡ ಭವನದಲ್ಲಿ ಆರ್ಥಿಕ ಬಿಕ್ಕಟ್ಟು ಕುರಿತು ಎಐಡಿವೈಒ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂವಾದ ಕಾರ್ಯಕ್ರಮ
ನಗರದ ಕನ್ನಡ ಭವನದಲ್ಲಿ ಆರ್ಥಿಕ ಬಿಕ್ಕಟ್ಟು ಕುರಿತು ಎಐಡಿವೈಒ ಏಪರ್ಡಿಸಿದ್ದ ಸಂವಾದ ಉದ್ಘಾಟಿಸಿ ಮಾತನಾಡಿದ ಅವರು, ಆರ್ಥಿಕ ಬಿಕ್ಕಟ್ಟು ಈ ದೇಶದ ಬಡ ವರ್ಗ, ಶೋಷಿತ ವರ್ಗ, ಕಾರ್ಮಿಕ, ರೈತ ವರ್ಗದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ ಹೊರತು, ಯಾವುದೇ ಕಾರಣಕ್ಕೂ ಬಂಡವಾಳ ಶಾಹಿಗಳ ಮೇಲೆ ಪರಿಣಾಮ ಬೀರಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಈ ವೇಳೆ ದೇಶದ ಆರ್ಥಿಕ ಬಿಕ್ಕಟ್ಟಿನ ಕುರಿತ ಸಮಾಲೋಚನೆ ಮಾಡಲಾಯಿತು. ದೇಶದ ಆರ್ಥಿಕ ನೀತಿಗೆ ಪ್ರಸ್ತುತ ಕೇಂದ್ರ ಸರ್ಕಾರದ ನೀತಿಗಳೇ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು.