ಕಲಬುರಗಿ: ರಾಜ್ಯ ಕೃಷಿ ಇಲಾಖೆಯಲ್ಲಿ ಯಾವುದೇ ಚಟುವಟಿಕೆಗಳು ನಡೆಯುತ್ತಿಲ್ಲ ಎಂದು ರೈತ ಮುಖಂಡ, ಶ್ರಮಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರ್ ಹಿರೇಮಠ್ ಆರೋಪಿಸಿದರು.
ಕೃಷಿ ಇಲಾಖೆಯಲ್ಲಿ ಎಲ್ಲಾ ಚಟುವಟಿಕೆ ಸ್ಥಗಿತ.. ಶ್ರಮಜೀವಿಗಳ ವೇದಿಕೆ ಅಧ್ಯಕ್ಷರ ಕಿಡಿ - Department of Agriculture have been halted
ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಮಧ್ಯಪ್ರವೇಶಿಸಿ ರೈತರಿಗೆ ಆಗುತ್ತಿರುವ ಅನ್ಯಾಯ ಹಾಗೂ ವಂಚನೆ ತಪ್ಪಿಸಬೇಕು..
ಶ್ರಮಜೀವಿಗಳ ವೇದಿಕೆ ಅಧ್ಯಕ್ಷ ಚಂದ್ರಶೇಖರ್
ಕಲಬುರಗಿಯಲ್ಲಿ ಮಾತನಾಡಿದ ಅವರು, ಕೃಷಿ ಸಚಿವ ಬಿ ಸಿ ಪಾಟೀಲ್ ತೆಗೆದುಕೊಂಡ ನಿರ್ಧಾರ ಇಂದು ಕೃಷಿಕರಿಗೆ ಕಂಟಕವಾಗಿ ಕಾಡುತ್ತಿದೆ. ಇದರಿಂದ ಸಿರಿಧಾನ್ಯ ಕಾರ್ಯಕ್ರಮ ಸೇರಿ ಬೆಳೆ ಹಾನಿ ಸಮೀಕ್ಷೆ ಕೂಡ ಸ್ಥಗಿತಗೊಳಿಸಲಾಗಿದೆ ಎಂದರು.
ಮೊಬೈಲ್ ಆ್ಯಪ್ ಸಮೀಕ್ಷೆ ಸರಿಯಾಗಿ ಮಾಡದ ಕಾರಣ ಕೃಷಿ ಇಲಾಖೆಯಲ್ಲಿ ಎಲ್ಲಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಆದ್ದರಿಂದ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪನವರು ಮಧ್ಯಪ್ರವೇಶಿಸಿ ರೈತರಿಗೆ ಆಗುತ್ತಿರುವ ಅನ್ಯಾಯ ಹಾಗೂ ವಂಚನೆ ತಪ್ಪಿಸಬೇಕು ಎಂದು ಆಗ್ರಹಿಸಿದರು.