ಕಲಬುರಗಿ:ಎಪಿಎಂಸಿ ಕಾಯ್ದೆ ಹಾಗೂ ಭೂ ಸುಧಾರಣಾ ಕಾಯ್ದೆ ಸುಗ್ರೀವಾಜ್ಞೆಗೆ ವಿರೋಧಿಸಿ, ಸೆಪ್ಟೆಂಬರ್ 28ರಂದು ನಡೆಯಲಿರುವ ಬಂದ್ಗೆ ಬೆಂಬಲ ಸೂಚಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಭೂ ಸುಧಾರಣೆ ಕಾಯ್ದೆ ವಿರುದ್ಧ ಸಿಡಿದೆದ್ದ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ
ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ. ಭೂ ಸುಧಾರಣಾ ಕಾಯ್ದೆ ರೈತರಿಗೆ ಮರಣ ಶಾಸನ ಎಂದು ಘೋಷಣೆ ಕೂಗುತ್ತಾ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಲಬುರಗಿಯಲ್ಲಿ ಪ್ರತಿಭಟನೆ
ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಕಲಬುರಗಿಯ ಜಗತ್ ವೃತ್ತದ ಬಳಿ ರಸ್ತೆ ತಡೆ ನಡೆಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.
ಕೇಂದ್ರದ 11 ಸುಗ್ರೀವಾಜ್ಞೆಗಳು ರೈತ, ಕಾರ್ಮಿಕ, ದಲಿತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿ ರೈತರಿಗೆ ಮಾರಕ. ಭೂ ಸುಧಾರಣಾ ಕಾಯ್ದೆ ರೈತರಿಗೆ ಮರಣ ಶಾಸನ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಜನವಿರೋಧಿ ಸುಗ್ರೀವಾಜ್ಞೆ ವಾಪಸ್ ಪಡೆಯಲು ಆಗ್ರಹಿಸಿದರು.