ಕರ್ನಾಟಕ

karnataka

ETV Bharat / state

ಅಭ್ಯರ್ಥಿ ಪರ ಹಣ ಹಂಚಿಕೆ ಆರೋಪ: ಕಲಬುರಗಿಯಲ್ಲಿ ಕಾರ್ ಬೆನ್ನಟ್ಟಿ‌ ಹಿಡಿದ ಡಿಸಿ! - karnataka assebly election

ಅಭ್ಯರ್ಥಿ ಪರವಾಗಿ ಹಣ ಹಂಚಿಕೆ ಮಾಡಲಾಗ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ಓರ್ವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಭ್ಯರ್ಥಿ ಪರವಾಗಿ ಹಣ ಹಂಚಿಕೆ ಆರೋಪ
ಅಭ್ಯರ್ಥಿ ಪರವಾಗಿ ಹಣ ಹಂಚಿಕೆ ಆರೋಪ

By

Published : May 9, 2023, 2:21 PM IST

Updated : May 9, 2023, 5:46 PM IST

ಅಭ್ಯರ್ಥಿ ಪರ ಹಣ ಹಂಚಿಕೆ ಆರೋಪ: ಕಲಬುರಗಿಯಲ್ಲಿ ಕಾರ್ ಬೆನ್ನಟ್ಟಿ‌ ಹಿಡಿದ ಡಿಸಿ!

ಕಲಬುರಗಿ:ವಿಧಾನಸಭೆ ಚುನಾವಣೆಗೆ ಮತದಾನ ಹಿನ್ನೆಲೆಯಲ್ಲಿ ಇಲ್ಲಿನ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರವಾಗಿ ಹಣ ಹಂಚಲಾಗ್ತಿದೆ ಎಂಬ ದೂರು ಕೇಳಿಬಂದಿತ್ತು.‌ ಸಂಗಮೇಶ್ವರ ನಗರದಲ್ಲಿ ಹಣ ಹಂಚಲಾಗ್ತಿದೆ ಎಂಬ ಮಾಹಿತಿ ಮೇರೆಗೆ ಕಳೆದ ರಾತ್ರಿ ಖುದ್ದು ಡಿಸಿ ಪರಿಶೀಲನೆಗೆ ಇಳಿದಿದ್ದರು. ಈ ವೇಳೆ ಡಿಸಿಯನ್ನು ಕಂಡು ಕಾರ್​ನಲ್ಲಿ ಪರಾರಿಯಾಗಲು ಯತ್ನಿಸಿದ್ದರು. ಆಗ ಅವರನ್ನು ಡಿಸಿ ಬೆನ್ನಟ್ಟಿ ಹಿಡಿದಿದ್ದಾರೆ. ಹಣ ಹಂಚಲಾಗ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕಳೆದ ರಾತ್ರಿ ಜಿಲ್ಲಾಧಿಕಾರಿ ಯಶವಂತ ಗುರುಕರ್ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.

ಜಿಲ್ಲಾಧಿಕಾರಿ ಆಗಮಿಸುತ್ತಿದ್ದಂತೆ ಹಣ ಹಂಚುತ್ತಿದ್ದವರು ವೇಗವಾಗಿ ಕಾರ್ ಚಲಾಯಿಸಿಕೊಂಡು ವಿದ್ಯಾನಗರದ ಕಡೆಗೆ ಪರಾರಿಯಾಗಿದ್ದಾರೆ. ಡಿಸಿ ಕೂಡ ತಮ್ಮ ಕಾರಿನಲ್ಲಿ ಪರಾರಿಯಾಗುತ್ತಿದ್ದವರ ಕಾರ್ ಬೆನ್ನಟ್ಟಿದ್ದಾರೆ. ಈ ವೇಳೆ ಕಾರ್‌ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ವಿದ್ಯಾನಗರ ಹನುಮಾನ ದೇವಸ್ಥಾನ ಬಳಿ ಕಾರಿಂದಿಳಿದು ಹಣವುಳ್ಳ ಬ್ಯಾಗ್‌ನೊಂದಿಗೆ ಪರಾರಿಯಾಗಿದ್ದಾರೆ ಎಂದು ಬೇರೊಂದು ಪಕ್ಷದ ಅಭ್ಯರ್ಥಿಗಳು ಆರೋಪಿಸಿದ್ದಾರೆ. ಕಾರ್​ನಲ್ಲಿ ಪ್ರಚಾರದ ಕೈಪಿಡಿ, ಪಾಂಪ್ಲೆಟ್ಸ್ ಸಿಕ್ಕಿವೆ.

ತಡರಾತ್ರಿಯೇ ಸ್ಥಳಕ್ಕೆ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತ ಚೇತನ್, ಡಿಸಿಪಿ ಅಡೂರು ಶ್ರೀನಿವಾಸುಲು ಪರಿಶೀಲನೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ರಾಜ್ಯದಲ್ಲಿ ಒಟ್ಟು ₹375.60 ಕೋಟಿ ಮೌಲ್ಯದ ನಗದು, ವಸ್ತುಗಳ ವಶ

ಬಿಜೆಪಿ ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಅಶೋಕನಗರ ಠಾಣೆಗೆ‌ ದೂರು ಕೊಟ್ಟಿದ್ದಾರೆ. ಬಳಿಕ ತಡರಾತ್ರಿಯೇ ಶಾಸಕರ ಸಹೋದರನ ನೇತೃತ್ವದಲ್ಲಿ ಅಶೋಕ‌ನಗರ ಠಾಣೆ ಎದುರು ಬಿಜೆಪಿ ಕಾರ್ಯಕರ್ತರು‌ ಪ್ರತಿಭಟನೆ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ಮುಖಂಡರು‌ ಸಹ ಪ್ರತಿಭಟಿಸಿದ್ದಾರೆ. ಈ ಬಗ್ಗೆ ಸಿಸಿಟಿವಿ ಪರಿಶೀಲಿಸಬೇಕು. ಮೊಬೈಲ್ ಲೊಕೇಷನ್ ಚೆಕ್ ಮಾಡಿದ್ರೆ ಬಿಜೆಪಿ ಅಭ್ಯರ್ಥಿ ಎಲ್ಲಿದ್ದರು ಎಂಬುದು ಗೊತ್ತಾಗುತ್ತದೆ. ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡಬೇಕು ಕಾಂಗ್ರೆಸ್​ನವರು ಒತ್ತಾಯಿಸಿದ್ದಾರೆ.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಣ ಹಂಚಿದ ಆರೋಪ:ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಚಿಕ್ಕಲಸಂದ್ರದಲ್ಲಿ ಕಳೆದ ರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಹಣ ಹಂಚುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದರು. ಈ ವೇಳೆ ಬೀದಿ ಬೀದಿ ಮರದ ಬುಡದಲ್ಲಿ 3 ಲಕ್ಷ ರೂ ಹಣ ಪತ್ತೆಯಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಮನೆ ಮನೆಗೆ ತೆರಳಿ ಹಣ ಹಂಚಲಾಗುತ್ತಿದೆ ಎಂದು ಎಂದು ಬಿಜೆಪಿ ಅಭ್ಯರ್ಥಿ ಪರ ಕಾರ್ಯಕರ್ತರು ಆರೋಪಿಸಿದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿದ್ದು, ಸ್ಥಳಕ್ಕೆ ಸುಬ್ರಹ್ಮಣ್ಯಪುರ ಠಾಣಾ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಈ ವೇಲೆ ಕೆಲ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ಉಂಟಾಗಿದ್ದರಿಂದ ಕೆಲ ಕೈ, ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Last Updated : May 9, 2023, 5:46 PM IST

ABOUT THE AUTHOR

...view details