ಕರ್ನಾಟಕ

karnataka

ETV Bharat / state

ಚರ್ಚ್​ ಫಾದರ್​​​ನಿಂದ ಲೈಂಗಿಕ ಕಿರುಕುಳ ಆರೋಪ: ಕಮಿಷನರ್​ ಕಚೇರಿ ಮುಂದೆಯೇ ಮಹಿಳೆ ಆತ್ಮಹತ್ಯೆ ಯತ್ನ - Cathedral Church Father Cleven

ಚರ್ಚ್​ ಫಾದರ್​ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದಾಗಲೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಸಂತ್ರಸ್ತೆವೋರ್ವಳು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಕಲಬುರಗಿ ಕಮಿಷನರ್​ ಕಚೇರಿ ಮುಂದೆ ಈ ಘಟನೆ ನಡೆದಿದೆ.

sexual-harassment-from-church-father
ಚರ್ಚ್​ ಫಾದರ್​​​ನಿಂದ ಲೈಂಗಿಕ ಕಿರುಕುಳ ಆರೋಪ

By

Published : Sep 23, 2020, 12:42 PM IST

ಕಲಬುರಗಿ: ಚರ್ಚ್ ಫಾದರ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆವೋರ್ವಳು ಪೊಲೀಸ್​ ಕಮಿಷನರ್​ ಕಚೇರಿ ಆವರಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ಕಮಿಷನರ್​ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಚರ್ಚ್​ ಫಾದರ್​ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದಾಗಲೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾಳೆ. ಅಲ್ಲದೆ, ಮನನೊಂದು ಕಚೇರಿ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

ನಗರದ ಸೇಂಟ್ ಮೇರಿ ಕ್ಯಾಥೋಡ್ರಾಲ್ ಚರ್ಚ್​​ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆಗೆ ಫಾದರ್ ಕ್ಲೀವನ್ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಮಹಿಳೆಯು ಸೈಬರ್ ಕ್ರೈಂ ಠಾಣೆಗೆ ವಿಚಾರಣೆಗೆ ಆಗಮಿಸಿದ ವೇಳೆ ತನಗೆ ನ್ಯಾಯ ಸಿಗುವುದಿಲ್ಲ ಎಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಸದ್ಯ ಸಂತ್ರಸ್ತೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ABOUT THE AUTHOR

...view details