ಕರ್ನಾಟಕ

karnataka

ETV Bharat / state

ಬಿಜೆಪಿ ಶಾಸಕನ ವಿರುದ್ಧ ಮಹಿಳೆಯಿಂದ ದೌರ್ಜನ್ಯ ಆರೋಪ: ನಾನು ತಪ್ಪೇ ಮಾಡಿಲ್ಲ ಎಂದ ತೆಲ್ಕೂರ - allegation of assaulting woman aganist BJP MLA

ಸೇಡಂನ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಅವರ ವಿರುದ್ಧ ಮಹಿಳೆಯೊಬ್ಬರು ದೌರ್ಜನ್ಯವೆಸಗಿರುವ ಆರೋಪ ಮಾಡಿದ್ದಾರೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಶಾಸಕರು, ನಾನು ಯಾವುದೇ ತಪ್ಪು ಮಾಡಿಲ್ಲ. ಎಂತಹ ತನಿಖೆಗೂ ಸಿದ್ಧನಿದ್ದೇನೆ ಎಂದಿದ್ದಾರೆ.

ಸೇಡಂನ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ
ಸೇಡಂನ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ

By

Published : Feb 7, 2022, 11:30 AM IST

Updated : Feb 7, 2022, 1:26 PM IST

ಕಲಬುರಗಿ: ಸೇಡಂನ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ ಅವರು, ಮಹಿಳೆ ಮೇಲೆ ದೌರ್ಜನ್ಯವೆಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಶಾಸಕ ತೆಲ್ಕೂರ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ತಪ್ಪು ಮಾಡಿಲ್ಲ. ಎಂತಹ ತನಿಖೆಗೂ ಸಿದ್ಧನಿದ್ದೇನೆ ಎಂದಿದ್ದಾರೆ.

ಸೇಡಂನ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ

ಕಲಬುರಗಿ ಏರ್​​​ಪೋರ್ಟ್‌ನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ, ಸರ್ಕಾರ ಯಾವುದೇ ರೀತಿಯ ತನಿಖೆ ಬೇಕಾದರೂ ನಡೆಸಬಹುದು. ತಪ್ಪಿತಸ್ಥರು ಯಾರೇ ಇದ್ದರೂ ಕ್ರಮ ಕೈಗೊಳ್ಳಲಿ. ನಾನು ಯಾರ ಮಾನಕ್ಕೂ ಧಕ್ಕೆ ತರುವ ಕೆಲಸ ಮಾಡಿಲ್ಲ. ಪಕ್ಷಕ್ಕೆ ಹಾಗೂ ಮತದಾರರಿಗೆ ಮುಜುಗರ ತರುವ ಕೆಲಸ ಎಂದಿಗೂ ಮಾಡಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದು ಹೇಳುವ ಮೂಲಕ ಆರೋಪ ತಳ್ಳಿ ಹಾಕಿದ್ದಾರೆ.

ಮಹಿಳೆಯೊಬ್ಬರು ನನಗೆ ನಿರಂತರವಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಪೊಲೀಸ್ ಕಂಪ್ಲೇಂಟ್ ನೀಡಿದ್ದೇನೆ. ಹೀಗಾಗಿ ವಿಧಾನಸೌಧ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಾನು ಕಾನೂನು ರೀತಿಯಲ್ಲಿ ಇದನ್ನು ಎದರಿಸಲು ಸಿದ್ಧನಿದ್ದೇನೆ ಎಂದು ತೆಲ್ಕೂರ ಹೇಳಿದ್ದಾರೆ.

ಇದನ್ನೂ ಓದಿ:ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ಯಮರಾಜನ ಅಟ್ಟಹಾಸ: ತಾಯಿ, ಮಗಳು, ಮೊಮ್ಮಗಳು ಸಾವು!

ಏನಿದು ಮಹಿಳೆ ಆರೋಪ?:ಶಾಸಕ ತೆಲ್ಕೂರ ವಿರುದ್ಧ ಮಹಿಳೆಯೊಬ್ಬರು ದೌರ್ಜನ್ಯ ಆರೋಪ ಮಾಡಿದ್ದಾರೆ. ಕಳೆದ 14 ವರ್ಷದಿಂದ ಆಕೆಯ ಮೇಲೆ ಶಾಸಕರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ನನಗೆ ನ್ಯಾಯಬೇಕು ಅಂತ ಮಹಿಳೆ ಕೇಳಿಕೊಂಡಿದ್ದಾರೆ.

ಸೇಡಂನ ಬಿಜೆಪಿ ಶಾಸಕ ರಾಜಕುಮಾರ ಪಾಟೀಲ್ ತೆಲ್ಕೂರ

ಆರೋಪ ಮಾಡುತ್ತಿದ್ದಂತೆ ಬೆಂಗಳೂರು ವಿಧಾನಸೌಧಾ ಪೊಲೀಸರು ಬೆಳಗ್ಗೆ ಮನೆಯಿಂದ ಕರೆತಂದು ರಾತ್ರಿ 9 ಗಂಟೆವರೆಗೆ ಸ್ಟೇಷನ್‌ನಲ್ಲಿ ಕೂಡಿ ಹಾಕಿದ್ದಾರೆ. ಕಾಂಗ್ರೆಸ್ ಪ್ರಚೋದಿಸಿದ್ದು ಕಾಂಗ್ರೆಸ್‌ನವರು ಹೇಳಿದಂತೆ ಆರೋಪ ಮಾಡಿದ್ದೇನೆ ಅಂತ ಬರೆದುಕೊಡು ಎಂದು ಸಿಬ್ಬಂದಿ ಒತ್ತಡ ಹಾಕಿದ್ದಾರೆಂದು ಮಹಿಳೆ ಹೇಳಿದ್ದಾರೆ.

ಸ್ಟೇಷನ್​ನಿಂದ ಹೊರಬಂದ ಬಳಿಕ ಮಹಿಳೆ ವಕೀಲ ಜಗದೀಶ್​​ ಅವರಿಗೆ ವಿಡಿಯೋ ಕಾಲ್ ಮಾಡಿ, ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ವಿಡಿಯೋ ಕಾಲ್​ನಲ್ಲಿ ನ್ಯಾಯ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ವಕೀಲ ಜಗದೀಶ್​​ ಅವರು ತಮ್ಮ ಫೇಸ್‌ಬುಕ್ ಲೈವ್​​ನಲ್ಲಿ ಈ ವಿಷಯ ಜನರ ಮುಂದೆ ಇಟ್ಟಿದ್ದಾರೆ.

Last Updated : Feb 7, 2022, 1:26 PM IST

For All Latest Updates

ABOUT THE AUTHOR

...view details