ಕಲಬುರಗಿ: ಅಂಗನವಾಡಿ ಕೇಂದ್ರಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಪ್ರಾರಂಭಿಸುವಂತೆ ಒತ್ತಾಯಿಸಿ ನಗರದಲ್ಲಿ ಪ್ರತಿಭಟನೆ ನಡೆಯಿತು.
ಅಂಗನವಾಡಿಗಳಲ್ಲಿ ಎಲ್ಕೆಜಿ - ಯುಕೆಜಿ ಪ್ರಾರಂಭಿಸಲು ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ - Protests by Farmers' Association in Kalaburagi
ಶಾಲೆಗಳ ಬದಲಾಗಿ ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವಂತೆ ಒತ್ತಾಯಿಸಿ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಕಲಬುರಗಿಯಲ್ಲಿ ಪ್ರತಿಭಟನೆ
ಕಲಬುರಗಿಯಲ್ಲಿ ಪ್ರತಿಭಟನೆ
ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಸಿಐಟಿಯು ಮತ್ತು ಕರ್ನಾಟಕ ಪ್ರಾಂತ ರೈತ ಸಂಘ ಸದಸ್ಯರು, ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ. ಪ್ರಾರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಈ ಹಿಂದೆ ಅಂಗನವಾಡಿಗಳಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲಾಗುತ್ತಿತ್ತು. ರಾಜ್ಯ ಸರ್ಕಾರದ ನಿರ್ಧಾರದಿಂದಾಗಿ ಅಂಗನವಾಡಿಗಳ ಅಸ್ತಿತ್ವಕ್ಕೆ ಧಕ್ಕೆ ಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ ಅಂಗನವಾಡಿ ಕೇಂದ್ರಗಳಲ್ಲೇ ಎಲ್.ಕೆ.ಜಿ. ಮತ್ತು ಯು.ಕೆ.ಜಿ ತರಗತಿಗಳನ್ನು ಆರಂಭಿಸಿ, ಅವುಗಳನ್ನು ಸದೃಢಗೊಳಿಸಬೇಕೆಂದು ಆಗ್ರಹಿಸಿದರು.
Last Updated : Dec 11, 2019, 3:12 PM IST