ಕರ್ನಾಟಕ

karnataka

ETV Bharat / state

ಕಲಬುರಗಿಯಲ್ಲಿ ಮತ್ತೋರ್ವ 56 ವರ್ಷದ ವ್ಯಕ್ತಿ ಕೊರೊನಾಗೆ ಬಲಿ

ಕೊರೊನಾ ಸೋಂಕಿನಿಂದ ಕಲಬುರಗಿ ನಗರದಲ್ಲಿಂದು ಮತ್ತೋರ್ವ 56 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌30ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದರು.

Kalaburagi
ಕೊರೊನಾಗೆ ಬಲಿ

By

Published : Jul 9, 2020, 12:13 AM IST

ಕಲಬುರಗಿ: ಕೊರೊನಾ ಸೋಂಕಿನಿಂದ ನಗರದಲ್ಲಿ ಇಂದು ಮತ್ತೋರ್ವ 56 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾನೆ.

ನಗರದ ರಿಂಗ್ ರೋಡ್ (ಮಹಾರಾಜ ಹೋಟೆಲ್) ಪ್ರದೇಶದ 56 ವರ್ಷದ ವ್ಯಕ್ತಿ (P-23277) ಜು.5 ರಂದು ಮೃತಪಟ್ಟಿದ್ದಾರೆ. ಇದರಿಂದ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ ‌30ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದರು. ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಅಧಿಕ ರಕ್ತದೊತ್ತಡ, ಮಧುಮೇಹ ಹಾಗೂ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದ ಇವರಿಗೆ ಜು.5 ರಂದು ಕೊರೊನಾ ಸೋಂಕು ಪತ್ತೆಯಾಗಿದ್ದರಿಂದ ಕಲಬುರಗಿ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು.

66 ಜನರಿಗೆ ಸೋಂಕು
ಇಂದು ಜಿಲ್ಲೆಯಲ್ಲಿ ಓರ್ವ ಸಾವನಪ್ಪಿದರೆ 66 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ 7 ಮಕ್ಕಳು, 23 ಮಹಿಳೆಯರು 36 ಜನ ಪುರುಷರಲ್ಲಿ ಸೋಂಕು ಕಾಣಿಸಿಕೊಂಡಿದೆ. (ILI - 22, ಕಾಂಟ್ಯಾಕ್ಟ್ ಅಂಡರ್ ಟ್ರೇಸಿಂಗ್ 24, Sari - 1) ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1816 ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 22 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ ಆದವರ ಸಂಖ್ಯೆ 1351 ಕ್ಕೆ ಏರಿಕೆಯಾಗಿದ್ದು. 435 ಆ್ಯಕ್ಟಿವ್ ಕೇಸ್​ಗಳಿವೆ.

ABOUT THE AUTHOR

...view details