ಕಲಬುರಗಿ: ಹೆಮ್ಮಾರಿ ಕೊರೊನಾಗೆ ಕಲಬುರಗಿಯಲ್ಲಿ ಮತ್ತೊಂದು ಬಲಿಯಾಗಿದೆ. 65 ವರ್ಷದ (ಪಿ.12306) ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದಾನೆ.ಜೂನ್ 25 ರಂದು ಶೀತ, ಜ್ವರ ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ವ್ಯಕ್ತಿ ಜೂನ್ 26 ರಂದು ಮೃತಪಟ್ಟಿದ್ದಾರೆ.
ಕಲಬುರಗಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ:ಸೋಂಕಿಗೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿಕೆ - ಕಲಬುರಗಿಯಲ್ಲಿ ಕೊರೊನಾ ಪ್ರಕರಣ
ದೇಶದಲ್ಲಿ ಮೊದಲ ಕೊರೊನಾ ಸೋಂಕಿತ ಮೃತಪಟ್ಟಿದ್ದ ಕಲಬುರಗಿ ಜಿಲ್ಲೆಯಲ್ಲಿ ಮತ್ತೊಬ್ಬ ಸೋಂಕಿತ ಬಲಿಯಾಗಿದ್ದಾನೆ.
ಕಲಬುರಗಿಯಲ್ಲಿ ಕೊರೊನಾಗೆ ಮತ್ತೊಂದು ಬಲಿ
ಇದರಿಂದ ಜಿಲ್ಲೆಯಲ್ಲಿ ಮೃತರ ಸಂಖ್ಯೆ 18 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ವರ್ಷದ ಮಗು ಸೇರಿ 34 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1398ಕ್ಕೆ ಏರಿಕೆಯಾಗಿದೆ. ಸಂತಸದ ವಿಚಾರವೆಂದರೆ ಇಂದು 50 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿವರೆಗೆ 1009 ಜನ ಗುಣಮುಖರಾಗಿದ್ದಾರೆ. ಇನ್ನು 371 ಸಂಕ್ರಿಯ ಪ್ರಕರಣಗಳಿದ್ದು, ನಿಗಧಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.