ಸೇಡಂ:ಬೆಂಗಳೂರಿನ ಕೆ.ಜಿ.ಹಳ್ಳಿಯ ಘಟನೆಯಲ್ಲಿ ಪತ್ರಕರ್ತರ ಮೇಲಾಗಿರುವ ಹಲ್ಲೆ ಖಂಡಿಸಿ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಸಹಾಯಕ ಆಯುಕ್ತ ರಮೇಶ ಕೋಲಾರ ಅವರಿಗೆ ಸಲ್ಲಿಸಲಾಯಿತು.
ಪತ್ರಕರ್ತರ ಮೇಲಿನ ಹಲ್ಲೆ ಖಂಡನೆ: ಸಹಾಯಕ ಆಯುಕ್ತರ ಮೂಲಕ ಸಿಎಂಗೆ ಮನವಿ ಪತ್ರ - Sedam working journalist
ಕೆ.ಜಿ.ಹಳ್ಳಿ ಘಟನೆಯಲ್ಲಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಸೇಡಂ ಕಾರ್ಯನಿರತ ಪತ್ರಕರ್ತರ ಸಂಘ ಸಿಎಂಗೆ ಮನವಿ ಪತ್ರ ಸಲ್ಲಿಸಿದರು.
ಕೆ.ಜಿ.ಹಳ್ಳಿಯಲ್ಲಿ ನಡೆದ ಶಾಸಕರ ಮತ್ತು ಪೊಲೀಸ್ ಠಾಣೆಯ ಮೇಲಿನ ದುಷ್ಕರ್ಮಿಗಳ ದಾಳಿಯ ವರದಿಗಾಗಿ ತೆರಳಿದ್ದ ಪತ್ರಕರ್ತರನ್ನೂ ಸಹ ಥಳಿಸಲಾಗಿದೆ. ಅಲ್ಲದೆ ಅವರ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ರಾಜ್ಯದಲ್ಲಿ ಪತ್ರಕರ್ತರ ಮೇಲಿನ ಹಲ್ಲೆ ಪ್ರಕರಣಗಳು ದಿನೇ ದಿನೆ ಹೆಚ್ಚುತ್ತಿದ್ದು, ಕೂಡಲೇ ರಾಜ್ಯ ಸರ್ಕಾರ ವೈದ್ಯರ ರಕ್ಷಣೆಗೆ ಇರುವ ಕಾಯ್ದೆ ವ್ಯಾಪ್ತಿಗೆ ಪತ್ರಕರ್ತರನ್ನೂ ತರಬೇಕು ಎಂದು ಆಗ್ರಹಿಸಿದರು.
ಪತ್ರಕರ್ತರ ಮೇಲೆ ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದೆ ಇಂತಹ ಘಟನೆಗಳು ಸಂಭವಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ನಂತರ ಪತ್ರಕರ್ತರ ತೇಜೋವಧೆಗೆ ಮುಂದಾಗಿರುವ ಆರ್.ಟಿ.ಐ ಕಾರ್ಯಕರ್ತ ಸಿದ್ದು ಹಿರೇಮಠ ವಿರುದ್ಧ ಕ್ರಮ ಜರುಗಿಸಬೇಕು ಮತ್ತು ನಕಲಿ ಪತ್ರಕರ್ತರ ಹಾವಳಿ ತಡೆಯಬೇಕು ಎಂದು ಸಿಪಿಐ ರಾಜಶೇಖರ ಹಳಗೋದಿ, ಪಿಎಸ್ಐ ಸುಶೀಲಕುಮಾರ, ಅಪರಾಧ ವಿಭಾಗ ಪಿಎಸ್ಐ ಅಯ್ಯಪ್ಪ ಅವರಿಗೆ ಮನವಿ ಸಲ್ಲಿಸಿ ಕೋರಲಾಯಿತು.