ಕರ್ನಾಟಕ

karnataka

By

Published : Sep 21, 2020, 1:06 PM IST

ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಸರ್ಕಾರ ಕೂಡಲೇ ಆಶಾ ಕಾರ್ಯಕರ್ತೆಯರ ಮಾನಸಿಕ ವೇತನವನ್ನು 12 ಸಾವಿರ ರೂ.ಗೆ ನಿಗದಿ ಮಾಡುವುದು ಹಾಗೂ ಬಾಕಿ ಪ್ರೋತ್ಸಾಹಧನ ಪಾವತಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

Protest
Protest

ಕಲಬುರಗಿ: ಮಾಸಿಕ 12 ಸಾವಿರ ರೂ. ವೇತನ ನಿಗದಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಆಶಾ ಕಾರ್ಯಕರ್ತೆಯರು, ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆ ಹಾಗೂ ಜನಸಮೂಹದ ಮಧ್ಯೆ ಸಂಪರ್ಕ ಸೇತುವೆಯಾಗಿ ನಿಸ್ವಾರ್ಥದಿಂದ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಶ್ರಮಿಸುತ್ತಿದ್ದಾರೆ. ಅಲ್ಲದೆ ಕೋವಿಡ್ ಸಂದರ್ಭದಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ. ಆದ್ರೆ ಸರ್ಕಾರ ಆಶಾ ಕಾರ್ಯಕರ್ತೆಯರ ಮಾಸಿಕ ವೇತನ ಹೆಚ್ಚಿಸುವುದಿರಲಿ, ಸರಿಯಾದ ಸಮಯಕ್ಕೆ ವೇತನ‌ ನೀಡುತ್ತಿಲ್ಲ. ಈ ಕುರಿತು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ABOUT THE AUTHOR

...view details