ಕಲಬುರಗಿ:ಮಾಸಿಕ 12 ಸಾವಿರ ರೂಪಾಯಿ ಗೌರವ ಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯಲ್ಲಿ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರೆಸಿದ್ದಾರೆ.
ಕಲಬುರಗಿ: ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಆಗ್ರಹ
ಮಾಸಿಕ ಕನಿಷ್ಠ 12 ಸಾವಿರ ರೂಪಾಯಿ ಗೌರವ ಧನ ನೀಡಬೇಕು. ಕೊರೊನಾದಂತಹ ಸೋಂಕಿನ ನಿಯಂತ್ರಣದಲ್ಲಿ ಕೆಲಸ ಮಾಡುತ್ತಿರುವುದರಿಂದ ಅಗತ್ಯ ಸುರಕ್ಷತಾ ಸಾಮಗ್ರಿ ನೀಡಬೇಕೆಂದು ಕಲಬುರಗಿಯಲ್ಲಿ ಆಶಾ ಕಾರ್ಯಕರ್ತೆಯರು ಆಗ್ರಹಿಸಿದ್ದಾರೆ.
ಮಾಸಿಕ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದ ಆಶಾ ಕಾರ್ಯಕರ್ತೆಯರು
ಎಐಯುಟಿಯುಸಿ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಮಾಸಿಕ ಕನಿಷ್ಠ 12 ಸಾವಿರ ರೂಪಾಯಿ ಗೌರವ ಧನ ನೀಡಬೇಕು. ಕೊರೊನಾದಂತಹ ಸೋಂಕಿನ ನಿಯಂತ್ರಣಕ್ಕೆ ಕೆಲಸ ಮಾಡುತ್ತಿರುವುದರಿಂದ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸುರಕ್ಷತಾ ಸಾಮಗ್ರಿ ನೀಡಬೇಕೆಂದು ಆಗ್ರಹಿಸಿದ ಅವರು, ಡಿಸಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.