ಕಲಬುರಗಿ: ಬೈಕ್ ಮೇಲೆ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಪಿ ಅಂಡ್ ಟಿ ಕಾಲೋನಿ ಬಳಿ ನಡೆದಿದೆ.
ಕಲಬುರಗಿಯಲ್ಲಿ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ - assault on a man at Kalburgi
ಬೈಕ್ ಮೇಲೆ ಹೋಗುತ್ತಿದ್ದ ವ್ಯಕ್ತಿಯನ್ನು ತಡೆದು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದ ಪಿ ಅಂಡ್ ಟಿ ಕಾಲೋನಿ ಬಳಿ ನಡೆದಿದೆ.
ಹಲ್ಲೆಗೊಳಗಾದ ವ್ಯಕ್ತಿ
ಇಸ್ಲಾಮುದ್ದೀನ್ ಎಂಬಾತನ ಮೇಲೆ ಹಲ್ಲೆ ನಡೆದಿದ್ದು, ನಗರದ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹಲ್ಲೆಗೊಳಗಾದ ಇಸ್ಲಾಮುದ್ದೀನ್ ಸಿಎಎ ವಿರುದ್ಧದ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದನಂತೆ. ಇದೇ ಕಾರಣಕ್ಕೆ ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಐದಾರು ಜನರಿದ್ದ ಗುಂಪೊಂದು ಬಡಿಗೆಯಿಂದ ಹೊಡೆದು, ಚಾಕುವಿನಿಂದ ಇರಿದು ಹಲ್ಲೆ ಮಾಡಿದೆ ಎಂಬ ಆರೋಪ ಕೇಳಿ ಬಂದಿದೆ.
ಸ್ಟೇಷನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರ ತನಿಖೆ ನಂತರ ನಿಜಾಂಶ ತಿಳಿದುಬರಬೇಕಿದೆ.
TAGGED:
assault on a man at Kalburgi