ಕಲಬುರಗಿ: ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ದೇವತಕಲ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆದಿದೆ. ಗಾಯಾಳುವನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಜಮೀನು ಉಳುಮೆ ವೇಳೆ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಒತ್ತಾಯ - ಕಲಬುರಗಿ ಜಮೀನು ವಿಚಾರದಲ್ಲಿ ಯುವಕನ ಮೇಲೆ ಹಲ್ಲೆ ಸುದ್ದಿ
ಜಮೀನು ಉಳುಮೆ ಮಾಡುವಾಗ ಕೋಲಿ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಉದ್ದೇಶಪೂರ್ವಕವಾಗಿ ಅಮಾನವೀಯ ರೀತಿಯಲ್ಲಿ ಹಲ್ಲೆ ಮಾಡಲಾಗಿದೆ ಎಂದು ದೂರಲಾಗಿದೆ.
![ಜಮೀನು ಉಳುಮೆ ವೇಳೆ ಯುವಕನ ಮೇಲೆ ಹಲ್ಲೆ: ಆರೋಪಿಗಳ ಬಂಧನಕ್ಕೆ ಒತ್ತಾಯ ಜಮೀನು ವಿಚಾರದಲ್ಲಿ ಯುವಕನ ಮೇಲೆ ಹಲ್ಲೆ](https://etvbharatimages.akamaized.net/etvbharat/prod-images/768-512-7828394-338-7828394-1593500688796.jpg)
ಜಮೀನು ವಿಚಾರದಲ್ಲಿ ಯುವಕನ ಮೇಲೆ ಹಲ್ಲೆ
ಜಮೀನು ವಿಚಾರದಲ್ಲಿ ಯುವಕನ ಮೇಲೆ ಹಲ್ಲೆ
ಗಾಯಾಳು ಮಂಜುನಾಥನನ್ನು ಭೇಟಿಯಾದ ಕೋಲಿ ಸಮಾಜದ ಮುಖಂಡರು, ಆರೋಗ್ಯ ವಿಚಾರಿಸಿದ್ದಾರೆ. ಜಮೀನು ಉಳುಮೆ ಮಾಡುವಾಗ ಯುವಕನ ಮೇಲೆ ಉದ್ದೇಶಪೂರ್ವಕವಾಗಿ ಹಲ್ಲೆ ಮಾಡಲಾಗಿದೆ. ಈ ಬಗ್ಗೆ ತಡವಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಲ್ಲಿಯವರೆಗೂ ಆರೋಪಿಗಳನ್ನು ಬಂಧಿಸಿಲ್ಲ. ಇದರ ಹಿಂದೆ ಪ್ರಭಾವಿ ರಾಜಕಾರಣಿಗಳ ಕೈವಾಡವಿದೆ ಎಂದು ಆರೋಪಿಸಿದ್ದಾರೆ.
ಹಾಗಾಗಿ, ಕೂಡಲೇ ಹಲ್ಲೆಕೋರರನ್ನು ಬಂಧಿಸಬೇಕು. ಹಲ್ಲೆಗೊಳಗಾದ ವ್ಯಕ್ತಿಯ ಕುಟುಂಬಕ್ಕೆ ಸೂಕ್ತ ಭದ್ರತೆ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಈಶಾನ್ಯ ವಲಯ ಪೊಲೀಸ್ ಮಹಾನಿರ್ದೇಶಕರ ಕಛೇರಿ ಎದುರು ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.