ಕರ್ನಾಟಕ

karnataka

ETV Bharat / state

ವೇಶ್ಯಾವಾಟಿಕೆ ಆರೋಪ... ಸುಂಠಾಣದಲ್ಲಿ ಮಹಿಳೆಯರನ್ನ ಹಿಗ್ಗಾಮುಗ್ಗ ಥಳಿಸಿದ ಜನ - ವಿಡಿಯೋ

ಸುಂಠಾಣ ಗ್ರಾಮದ ಹೊರವಲಯದಲ್ಲಿ ಮನೆ ಮಾಡಿಕೊಂಡು ವಾಸವಾಗಿರುವ ಮಹಿಳೆವೋರ್ವಳು ವೇಶ್ಯಾವೃತ್ತಿಯಲ್ಲಿ ತೊಡಗಿದ್ದಾಳೆ. ಅಲ್ಲದೆ ಬೇರೆ ಕಡೆಯಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾಳೆಂದು ಆರೋಪಿಸಿ ಇಬ್ಬರು ಮಹಿಳೆಯರು ಹಾಗೂ ವ್ಯಕ್ತಿಯ ಮೇಲೆ ಯುವಕರು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ.

By

Published : Aug 13, 2019, 2:53 PM IST

ವೇಶ್ಯವಾಟಿಕೆ

ಕಲಬುರಗಿ:ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾರೆಂದು ಆರೋಪಿಸಿ ಮಹಿಳೆಯರ ಮೇಲೆ ದೊಣ್ಣೆ ಹಾಗೂ ಕೈಯಿಂದ ಹಲ್ಲೆ ಮಾಡಿರುವ ಘಟನೆ ಚಿಂಚೋಳಿ ತಾಲೂಕಿನ ಸುಂಠಾಣ ಗ್ರಾಮದಲ್ಲಿ ನಡೆದಿದೆ.

ವೇಶ್ಯಾವಾಟಿಕೆ ದಂಧೆ ಆರೋಪ: ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷನನ್ನು ಥಳಿಸಿದ ಗ್ರಾಮಸ್ಥರು

ಹಲವು ಯುವಕರು ಹಾಗೂ ಗ್ರಾಮದ ದಳಪತಿ ಸೇರಿ ಮಹಿಳೆಯರ ಮೇಲೆ ಹಾಗೂ ಒಳಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿದ್ದಲ್ಲದೆ ಮನೆಯ ಬಾಗಿಲು ಮುರಿದು ದುಂಡಾವರ್ತನೆ ತೋರಿದ್ದಾರೆ ಎನ್ನಲಾಗ್ತಿದೆ. ಸುಂಠಾಣ ಗ್ರಾಮದ ಹೊರವಲಯದಲ್ಲಿ ಮನೆ ಮಾಡಿಕೊಂಡು ವಾಸವಾಗಿರುವ ಮಹಿಳೆ ವೇಶ್ಯಾವೃತ್ತಿಯಲ್ಲಿ ತೊಡಗಿಸಿಕೊಂಡಿದ್ದಲ್ಲದೆ, ಬೇರೆಡೆಯಿಂದ ಯುವತಿಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಾಳೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಅಲ್ಲದೆ, ಮನೆಗೆ ನುಗ್ಗಿ ಇಬ್ಬರು ಮಹಿಳೆಯರು ಹಾಗೂ ಓರ್ವ ವ್ಯಕ್ತಿ ಮೇಲೆ ಹಲ್ಲೆ ಮಾಡಿದ್ದಾರೆ. 20 ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್​ ಆಗಿದ್ದಕ್ಕೆ ಪ್ರಕರಣ ಬೆಳಕಿಗೆ ಬಂದಿದೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಹಲ್ಲೆ ಆರೋಪದ ಮೇಲೆ ಗ್ರಾಮದ ದಳಪತಿ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ಇನ್ನೂ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡವರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ. ರಟಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details