ಕರ್ನಾಟಕ

karnataka

ETV Bharat / state

ವಿಧಾನಸಭಾ ಚುನಾವಣೆ ಹಿನ್ನಲೆ ಪಕ್ಕದ ರಾಜ್ಯಗಳಿಗೆ ನಮ್ಮ ಪೊಲೀಸರ ನಿಯೋಜನೆ : ಬೊಮ್ಮಾಯಿ - states in the wake of Assembly elections

ಕಾಂಗ್ರೆಸ್ ಆಡಳಿತಕಿಂತಲು ಸದ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ. ಅವರ ಆಡಳಿತದಲ್ಲಿ ಕೊಲೆ, ಸುಲಿಗೆ, ಗಾಂಜಾ ಸಾಗಾಟ ಎಷ್ಟರಮಟ್ಟಿಗೆ ನಡೆಯುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ..

ಬೊಮ್ಮಾಯಿ
ಬೊಮ್ಮಾಯಿ

By

Published : Mar 30, 2021, 6:05 PM IST

ಕಲಬುರಗಿ :ತಮಿಳುನಾಡು, ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ರಾಜ್ಯದ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನಂತೆ ತಮಿಳುನಾಡು, ಕೇರಳ ವಿಧಾನಸಭಾ ಚುನಾವಣೆಗೆ ರಾಜ್ಯ ಪೊಲೀಸ್ ಪಡೆ ತೆರಳಲಿದೆ ಎಂದರು.

ಕಾಂಗ್ರೆಸ್ ಆಡಳಿತಕಿಂತಲು ಸದ್ಯ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಅತ್ಯುತ್ತಮವಾಗಿದೆ. ಅವರ ಆಡಳಿತದಲ್ಲಿ ಕೊಲೆ, ಸುಲಿಗೆ, ಗಾಂಜಾ ಸಾಗಾಟ ಎಷ್ಟರಮಟ್ಟಿಗೆ ನಡೆಯುತ್ತಿತ್ತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್​ನವರು ವಿನಾಕಾರಣ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 52 ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೆ ಏರಿಸುವ ಆಲೋಚನೆ ನಡೆದಿದೆ. ಶೀಘ್ರದಲ್ಲೇ ಮೇಲ್ದರ್ಜೆಗೇರಿಸಲಾಗುವುದು ಎಂದರು.

ಇದನ್ನೂ ಓದಿ..ಸಿಡಿ ಲೇಡಿ ಕೋರ್ಟ್​ಗೆ ಹಾಜರ್​: ರಮೇಶ್ ಜಾರಕಿಹೊಳಿ‌ ದಿಢೀರ್​​ ಅಜ್ಞಾತ ಸ್ಥಳಕ್ಕೆ?

ABOUT THE AUTHOR

...view details