ಕಲಬುರಗಿ: ಆಯುಷ್ಮಾನ್ ಭಾರತ್ ಯೋಜನೆ ಅಂಗವಾಗಿ ಕಲಬುರಗಿಯಲ್ಲಿ ಜಾಥಾ ಆಯೋಜಿಸಿದ್ದು, ಆಯುಷ್ಮಾನ್ ಭಾರತ್ ಯೋಜನೆ ಕುರಿತು ಜಾಗೃತಿ ಮೂಡಿಸಲಾಯಿತು.
ಕಲಬುರಗಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾಗೃತಿ ಜಾಥಾ
ಕಲಬುರಗಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಅಂಗವಾಗಿ ಜಿಲ್ಲಾಡಳಿತ ವತಿಯಿಂದ ಜಾಥಾ ಹಮ್ಮಿಕೊಂಡಿದ್ದು, ಯೋಜನೆ ಕುರಿತು ಜಾಗೃತಿ ಮೂಡಿಸಲಾಯಿತು.
ಕಲಬುರಗಿಯಲ್ಲಿ ಆಯುಷ್ಮಾನ್ ಭಾರತ್ ಯೋಜನೆ ಜಾಗೃತಿ ಜಾಥಾ
ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ಜಿಲ್ಲಾಧಿಕಾರಿ ಬಿ.ಶರತ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭಗೊಂಡ ಜಾಥಾ ನಗರದ ವಿವಿಧೆಡೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಜಿಮ್ಸ್ವರೆಗೂ ಸಾಗಿ ಆಯುಷ್ಮಾನ್ ಭಾರತ್ ಯೋಜನೆ ಕುರಿತು ಅರಿವು ಮೂಡಿಸುವ ಪ್ರಯತ್ನ ನಡೆಯಿತು.
ಜಾಥಾ ಕಾರ್ಯಕ್ರಮದಲ್ಲಿ ಸಂಸದ ಉಮೇಶ್ ಜಾಧವ್, ಶಾಸಕ ದತ್ತಾತ್ರೇಯ ಪಾಟೀಲ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣ ಮಾಲಾಜಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.