ಕಲಬುರಗಿ:ಇಳಿ ವಯಸ್ಸಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದ್ದು, ಹೀಗಿರುವಾಗ ಸಿಎಂ ಆಗಿ ಮುಂದುವರಿಯುವ ಬದಲು ರಾಜೀನಾಮೆ ನೀಡಲಿ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ್ ಒತ್ತಾಯಿಸಿದ್ದಾರೆ.
ಬಿಎಸ್ವೈ ಒತ್ತಡದಲ್ಲಿ ಸಿಎಂ ಆಗಿರುವ ಬದಲು ರಾಜೀನಾಮೆ ನೀಡಲಿ: ಬಿ.ಆರ್.ಪಾಟೀಲ್ ಒತ್ತಾಯ
ಕೇಂದ್ರದ ಮುಂದೆ ಯಡಿಯೂರಪ್ಪ ಪದೇ ಪದೇ ಅಪಮಾನಕ್ಕೊಳಗಾಗುತ್ತಿದ್ದಾರೆ. ಇಂತಹ ಉಸಿರುಗಟ್ಟುವ ವಾತಾವರಣದಲ್ಲಿ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಅವಶ್ಯಕತೆಯಿಲ್ಲ ಎಂದು ಮಾಜಿ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಅತಿವೃಷ್ಟಿ ಮತ್ತು ಪ್ರವಾಹದಿಂದಾಗಿ ಜಿಲ್ಲೆಯಲ್ಲಿ ನೂರಾರು ಕೋಟಿ ಹಾನಿಯಾಗಿದೆ. ಆದರೆ ಇದುವರೆಗೂ ನಯಾಪೈಸೆ ಹಣ ಬಿಡುಗಡೆಯಾಗಿಲ್ಲ. ಎನ್ಡಿಆರ್ಎಫ್ ಅಡಿಯೂ ಕೇಂದ್ರ ಹಣ ಕೊಟ್ಟಿಲ್ಲ. ಪರಿಹಾರಕ್ಕಾಗಿ ಯಡಿಯೂರಪ್ಪ ಕೇಂದ್ರದ ಮುಂದೆ ಕೈಕಟ್ಟಿ ನಿಂತರೂ ಪ್ರಯೋಜನವಿಲ್ಲ ಎಂದಿದ್ದಾರೆ.
ಕೇಂದ್ರದ ಮುಂದೆ ಯಡಿಯೂರಪ್ಪ ಪದೇ ಪದೇ ಅಪಮಾನಕ್ಕೊಳಗಾಗುತ್ತಿದ್ದಾರೆ. ಇಂತಹ ಉಸಿರುಗಟ್ಟುವ ವಾತಾವರಣದಲ್ಲಿ ಸಿಎಂ ಸ್ಥಾನದಲ್ಲಿ ಮುಂದುವರಿಯುವ ಅವಶ್ಯಕತೆಯಿಲ್ಲ.
ಯಡಿಯೂರಪ್ಪ ತಕ್ಷಣ ಸಿಎಂ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಹೊರಬರಬೇಕು. ಕನಿಷ್ಠ ಘನತೆ ಗೌರವವಾದರೂ ಉಳಿಯುತ್ತದೆ ಎಂದು ಪಾಟೀಲ ಅಭಿಪ್ರಾಯಪಟ್ಟಿದ್ದಾರೆ.