ಕಲಬುರಗಿ: ವಿಮಾನ ನಿಲ್ದಾಣದ ಆವರಣದಲ್ಲಿದ್ದ ದೇವಸ್ಥಾನ ಧ್ವಂಸ ಪ್ರಕರಣದ ವಿವಾದ ಮುಂದುವರಿದಿದ್ದು, ಏರ್ ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ವಿರುದ್ಧ ಬಂಜಾರ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.
ವಿಮಾನ ನಿಲ್ದಾಣದ ಆವರಣದಲ್ಲಿ ದೇವಸ್ಥಾನ ಧ್ವಂಸ.. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ
ಕಲಬುರಗಿ ವಿಮಾನ ನಿಲ್ದಾಣದ ಆವರಣದಲ್ಲಿದ್ದ ಸಂತ ಸೇವಾಲಾಲ್ ಹಾಗೂ ಮರಿಯಮ್ಮ ದೇವಸ್ಥಾನಗಳ ಧ್ವಂಸ ಪ್ರಕರಣ ದಿನೇ ದಿನೇ ವಿವಾದದ ಸ್ವರೂಪ ಪಡೆದುಕೊಳ್ಳಲಾರಂಭಿಸಿದೆ. ದೇವಸ್ಥಾನ ಧ್ವಂಸಗೊಳಿಸಿದವರ ವಿರುದ್ಧ ಕ್ರಮಕ್ಕೆ ಬಂಜಾರ ಸಮುದಾಯ ಆಗ್ರಹಿಸಿದೆ.
ಘಟನೆ ಖಂಡಿಸಿ ಇಂದು ಬಂಜಾರ ವಸತಿ ನಿಲಯದ ಆವರಣದಲ್ಲಿ ಮುಖಂಡರು, ಸಮುದಾಯದ ಪ್ರತಿನಿಧಿಗಳ ಸಭೆ ನಡೆಯಿತು. ಸಬೆಯಲ್ಲಿ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಅದೇ ಸ್ಥಳದಲ್ಲಿ ದೇವಸ್ಥಾನ ಮರು ನಿರ್ಮಾಣ ಮಾಡಿ, ವಿಮಾನ ನಿಲ್ದಾಣಕ್ಕೆ ಸಂತ ಸೇವಾಲಾಲ್ ಹೆಸರಿಡಬೇಕೆಂದು ಆಗ್ರಹಿಸಲಾಯಿತು.
ಕಲಬುರ್ಗಿ ಸಂಸದ ಉಮೇಶ್ ಜಾಧವ್ ಲೋಕಸಭೆ ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು. ಇಂದು ನಡೆದ ಸಭೆಯಲ್ಲಿ ಅಖಿಲ ಭಾರತ ಬಂಜಾರಾ ಸೇವಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಅಮರಸಿಂಗ್ ತಿಲಾವಂತ್, ಸಂಸದ ಉಮೇಶ್ ಜಾಧವ್ ಸೇರಿದಂತೆ ಹಲವಾರು ಮುಖಂಡರು ಭಾಗಿಯಾಗಿದ್ದರು.
TAGGED:
ಬಂಜಾರ ಸಮುದಾಯದಿಂದ ಪ್ರತಿಭಟನೆ