ಕರ್ನಾಟಕ

karnataka

ETV Bharat / state

ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಐವರಿಗೆ ಗಾಯ - ಕಲಬುರಗಿ ಅಪಘಾತ

ಕಲಬುರಗಿಯಲ್ಲಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಬೈಕ್​ ಸವಾರ ಮೃತಪಟ್ಟು, ಐವರು ಗಾಯಗೊಂಡಿದ್ದಾರೆ.

bike-accident-in-kalburgi
ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ

By

Published : Feb 22, 2020, 5:01 AM IST

ಕಲಬುರಗಿ: ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ಬೈಕ್ ಸವಾರ ಮೃತಪಟ್ಟು ಐವರು ಗಾಯಗೊಂಡ ಘಟನೆ ಕಲಬುರಗಿ ತಾಲೂಕಿನ ಕಡಣಿ ಕ್ರಾಸ್ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ಜೇವರ್ಗಿ ಕಾಲೋನಿಯ ಧರೆಪ್ಪ (23) ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಧರೆಪ್ಪ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಊಟಕ್ಕೆಂದು ಹೋಟೆಲ್​ಗೆ ಹೋಗುತ್ತಿದ್ದ ಮಾರ್ಗ ಮಧ್ಯದಲ್ಲಿ ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಅಪಘಾತದಲ್ಲಿ ಶ್ರೀನಿವಾಸ ಮಾನೆ, ಆದಿತ್ಯ, ಸ್ವರೂಪ್, ಬಾಬಾಸಾಬ್ ಮತ್ತು ಜಾನ್ ಎಂಬುವರಿಗೆ ಗಾಯಗಳಾಗಿದ್ದು, ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಂಚಾರಿ ಪೊಲೀಸ್ ಠಾಣೆ– 1 ರಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details