ಕಲಬುರಗಿ:ನಾಳೆಯಿಂದ ಎರಡು ದಿನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕಲಬುರಗಿಯಲ್ಲಿ ವಿಭಾಗ ಮಟ್ಟದ ಪದಾಧಿಕಾರಿಗಳ ಸಂಘಟನಾ ಸಭೆ ನಡೆಯಲಿದೆ. ಈ ಮೂಲಕ ಕಲಬುರಗಿ, ಬೀದರ್ ಮತ್ತು ಯಾದಗಿರ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಲು ಬಿಜೆಪಿ ಮುಂದಾಗಿದೆ.
ಸೇಡಂ ರಸ್ತೆಯಲ್ಲಿರುವ ಗೀತಾ ನಗರದ ಬ್ರಹ್ಮಕುಮಾರಿ ಈಶ್ವರಿಯ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಮಧ್ಯಾಹ್ನ 2 ಗಂಟೆಯಿಂದ ಕೋರ್ ಕಮಿಟಿ ಪ್ರಾರಂಭಗೊಳ್ಳಲಿದೆ. ಬಸವರಾಜ ಬೊಮ್ಮಾಯಿ ನೇತೃತ್ವ ವಹಿಸಲಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಷಿ, ಭಗವಂತ ಖೂಭಾ ಮತ್ತು ಅಶ್ವತ್ಥ ನಾರಾಯಣ್, ವಿಜಯೇಂದ್ರ, ಲಕ್ಷ್ಮಣ ಸವದಿ, ನಿರ್ಮಲ್ ಕುಮಾರ ಸುರನ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.