ಕರ್ನಾಟಕ

karnataka

ETV Bharat / state

ಉಮೇಶ್​ ಜಾದವ್​ ರಾಜೀನಾಮೆ ಅಂಗೀಕರಿಸಲು ಆಗ್ರಹ - undefined

ಉಮೇಶ್​ ಜಾದವ್​ ಶಾಸಕ ಸ್ಥಾನಕ್ಕೆ ನಿಡಿರುವ ರಾಜೀನಾಮೆ ಅಂಗೀಕರಿಸದಿದ್ದರೆ ಕೊರ್ಟ್​ ಮೊರೆ ಹೊಗುವುದಾಗಿ ಕಲಬುರಗಿ ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ಹೇಳಿದ್ದಾರೆ.

ಉಮೇಶ್​ ಜಾದವ್​ ರಾಜೀನಾಮೆ ಅಂಗೀಕರಿಸಲು ಆಗ್ರಹ

By

Published : Mar 24, 2019, 6:24 PM IST

ಕಲಬುರಗಿ: ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾದವ್ ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವನ್ನು ಅನವಶ್ಯಕವಾಗಿ ವಿಳಂಬ ಮಾಡುತ್ತಿದ್ದಾರೆ ಎಂದು ಜಿಲ್ಲಾ ಗ್ರಾಮೀಣ ಬಿಜೆಪಿ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ್ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ರಾಜೀನಾಮೆ ಅಂಗಿಕಾರವನ್ನು ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಸ್ಪೀಕರ್ ಸ್ಥಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ರಾಜೀನಾಮೆ ಅಂಗೀಕಾರವಾಗಿಲ್ಲ ಎಂದು ಗೊಂದಲ ಸೃಷ್ಟಿಸಲಾಗಿತ್ತಿದೆ ಎಂದು ಆರೋಪಿಸಿದರು.

ಉಮೇಶ್​ ಜಾದವ್​ ರಾಜೀನಾಮೆ ಅಂಗೀಕರಿಸಲು ಆಗ್ರಹ

ಸ್ಪೀಕರ್ ಅವರು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಕಾನೂನಿನ ಪ್ರಕಾರ ಕೂಡಲೇ ರಾಜೀನಾಮೆ ಅಂಗೀಕರಿಸಬೇಕು. ಉಮೇಶ್ ಜಾಧವ್ ಅವರನ್ನು ಬಿಜೆಪಿ ಅಭ್ಯರ್ಥಿ ಎಂದು ಘೋಷಿಸಲಾಗಿದೆ. ಅವರೇ ಬಿಜೆಪಿಯಿಂದ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಗೊಂದಲಕ್ಕೆ ತೆರೆ ಎಳೆದರು. ಕೂಡಲೇ ರಾಜಿನಾಮೆ ಅಂಗೀಕರಿಸದಿದ್ದರೆ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಎಚ್ಚರಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details