ಕಲಬುರಗಿ:ಮತ್ತೋರ್ವ ಬಿಜೆಪಿ ನಾಯಕ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಶಾಕ್ ಮೇಲೆ ಶಾಕ್ ನೀಡಿದ್ದಾರೆ.
ಭೇಟಿ ಪಡಾವೋ ಭೇಟಿ ಬಚಾವೋ ರಾಜ್ಯ ಸಂಚಾಲಕ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸುಭಾಷ್ ರಾಠೋಡ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಬೇಟಿ ಪಡಾವೋ, ಬೇಟಿ ಬಚಾವೋ ಸಮಿತಿ ಸಂಚಾಲಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪಕ್ಷದ ಆಂತರಿಕ ಬೆಳವಣಿಗೆ ಹಾಗೂ ಉಮೇಶ್ ಜಾಧವ್ ಅವರನ್ನು ಕರೆತಂದು ಟಿಕೆಟ್ ನೀಡಿದ್ದರಿಂದ ಬೇಸತ್ತು ರಾಜೀನಾಮೆ ನೀಡಿದ್ದಾಗಿ ಉಲ್ಲೇಖಿಸಿರುವ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪಗೆ ರಾಠೋಡ್ ರವಾನಿಸಿದ್ದಾರೆ.
ನಿನ್ನೆಯಷ್ಟೇ ಮಾಜಿ ಸಚಿವ ಬಾಬುರಾವ್ ಚವ್ಹಾಣ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಮತ್ತೋರ್ವ ಮುಖಂಡ ರಾಜೀನಾಮೆ ನೀಡಿರುವುದು ಬಿಜೆಪಿಗೆ ಶಾಕ್ ನೀಡಿದಂತಾಗಿದೆ. ಬಂಜಾರ ಸಮುದಾಯದ ಪ್ರಬಲ ನಾಯಕರಾದ ಸುಭಾಷ್ ರಾಠೋಡ್ ರಾಜೀನಾಮೆಯಿಂದ ಬಿಜೆಪಿಗೆ ಭಾರಿ ಹೊಡೆತ ಬೀಳಲಿದೆ ಎನ್ನಲಾಗುತ್ತಿದೆ.