ಕರ್ನಾಟಕ

karnataka

ETV Bharat / state

ಬಿಜೆಪಿ ಮುಖಂಡರಿಗೆ ಜೀವ ಬೆದರಿಕೆ ಆರೋಪ: ಪ್ರಿಯಾಂಕ್ ಖರ್ಗೆ ವಿರುದ್ಧ ಪೊಲೀಸ್​ ಠಾಣೆಗೆ ದೂರು - ಕಲಬುರಗಿ ರಾಜಕೀಯ

ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಜೀವ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡರು ದೂರು ಕೊಟ್ಟಿದ್ದಾರೆ.

bjp-leaders-complaints-against-mla-priyank-kharge-in-wadi-police-station
ಬಿಜೆಪಿ ಮುಖಂಡರಿಗೆ ಜೀವ ಬೆದರಿಕೆ ಆರೋಪ: ಪ್ರಿಯಾಂಕ್ ಖರ್ಗೆ ವಿರುದ್ಧ ಪೊಲೀಸ್​ ಠಾಣೆಗೆ ದೂರು

By

Published : Nov 17, 2022, 3:29 PM IST

ಕಲಬುರಗಿ: ಬಿಜೆಪಿ ಮುಖಂಡರಿಗೆ ಶಾಸಕ ಪ್ರಿಯಾಂಕ್ ಖರ್ಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಚಿತ್ತಾಪುರ ಬಿಜೆಪಿ ತಾಲೂಕು ಅಧ್ಯಕ್ಷ ನೀಲಕಂಠ ಪಾಟೀಲ್ ಹಾಗೂ ಮುಖಂಡ ಮಣಿಕಂಠ ರಾಠೋಡ್ ವಾಡಿ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಕಲಬುರಗಿ: ಮತ್ತೋರ್ವ ಯುವಕನ ಕೊಲೆ; ಆಸ್ತಿ ವಿಚಾರಕ್ಕೆ ಕೃತ್ಯ ಶಂಕೆ

ಇತ್ತೀಚೆಗೆ ವಾಡಿ ಪುರಸಭೆಯಿಂದ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಶಾಸಕ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರ ವಿರುದ್ಧ ದ್ವೇಷದ ಹೇಳಿಕೆ ನೀಡಿದ್ದಾರೆ. ನಾವು ಮನಸ್ಸು‌ ಮಾಡಿದ್ರೆ ತಾಲೂಕು ಮಾತ್ರವಲ್ಲ ಇಡಿ ಜಿಲ್ಲೆಯಲ್ಲಿ ಯಾವೊಬ್ಬ ಬಿಜೆಪಿ ಮುಖಂಡ ಓಡಾಡಲು ಬಿಡುವುದಿಲ್ಲ ಎಂದು ಪ್ರಿಯಾಂಕ್ ಖರ್ಗೆ ಬಹಿರಂಗವಾಗಿ ಜೀವ ಬೆದರಿಕೆ ಹಾಕಿದ್ದಾರೆ.

ಆದ್ದರಿಂದ ಪ್ರಿಯಾಂಕ್ ಖರ್ಗೆ ವಿರುದ್ಧ ಜೀವ ಬೆದರಿಕೆ ಹಾಕಿದ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಬೇಕೆಂದು ಬಿಜೆಪಿ ಮುಖಂಡರು ದೂರು ಕೊಟ್ಟಿದ್ದಾರೆ.

ಇದನ್ನೂ ಓದಿ:ಶಾಸಕ ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡುವ ಹೇಳಿಕೆ: ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ಕೇಸ್

ABOUT THE AUTHOR

...view details