ಕಲಬುರಗಿ:ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ ಹಿನ್ನೆಲೆ ಜಿಲ್ಲೆಯ ವಾಡಿ ಪಟ್ಟಣದಲ್ಲಿ ಬೃಹತ್ ಮೆರವಣಿಗೆ ಮಾಡುವ ಮೂಲಕ ವಿಜಯೋತ್ಸವ ಆಚರಿಸಿಸಲಾಯಿತು.
ಕಲಬುರುಗಿಯಲ್ಲಿ ಬಿಜೆಪಿಯಿಂದ ವಿಜಯೋತ್ಸವ - Kalburgi
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದ ಹಿನ್ನೆಲೆ ಜಿಲ್ಲೆಯ ವಾಡಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಶೋಭಾಯಾತ್ರೆ ಕೈಗೊಂಡ ಬಿಜೆಪಿ ಕಾರ್ಯಕರ್ತರು
ಮಾಜಿ ಶಾಸಕ ವಾಲ್ಮೀಕ ನಾಯಕ ನೇತೃತ್ವದಲ್ಲಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸುವ ಮೂಲಕ ಶೋಭಾಯಾತ್ರೆ ಕೈಗೊಂಡ ಬಿಜೆಪಿ ಕಾರ್ಯಕರ್ತರು, ಗುಲ್ಬರ್ಗಾ ಲೋಕಸಭಾ ಕ್ಷೇತ್ರದ ನೂತನ ಸಂಸದ ಡಾ. ಉಮೇಶ್ ಜಾಧವ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಮೆರವಣಿಗೆ ಸಮಾರೋಪಗೊಂಡಿತು. ಮೆರವಣಿಗೆ ಉದ್ದಕ್ಕೂ ಮೋದಿ ಮೋದಿ ಅಂತಾ ಘೋಷಣೆ ಕೂಗಿದ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
TAGGED:
Kalburgi