ಕಲಬುರಗಿ :ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ’ಇಡಿ’ಯನ್ನು ಅಸ್ತ್ರವಾಗಿ ಬಳಸಿಕೊಂಡು ವಿಪಕ್ಷಗಳನ್ನು ದುರ್ಬಲಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪ ಮಾಡಿದ್ದಾರೆ.
ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳಾದ ಸಿಬಿಐ, ಐಟಿ, ಇಡಿ ಇವುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದು, ಮರ್ಡರ್ ಅಕ್ಸ್ಯೂಡ್ ಹೇಳಿಕೆ ಮೇರೆಗೆ ಚಾರ್ಚ್ಶೀಟ್ ಇಲ್ಲದೇ ರಾತ್ರೋರಾತ್ರಿ ಪಿ.ಚಿದಂಬರಂ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕದಲ್ಲಿ ಮಾತ್ರವಲ್ಲದೇ ಯುಪಿ, ರಾಜಸ್ತಾನ, ಎಂಪಿ,ದೆಹಲಿಯಲ್ಲಿರಬಹುದು ಇಲ್ಲೆಲ್ಲ ಕೇಂದ್ರ ಸಂಸ್ಥೆಗಳನ್ನು ಬಿಜೆಪಿ ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ. ಸಿಬಿಐ, ಐಟಿ, ಇಡಿ ಎಲ್ಲವನ್ನೂ ಬಳಸಿ ಬ್ಲ್ಯಾಕ್‌ಮೇಲ್ ತಂತ್ರ ಬಳಸುತ್ತಿದ್ದಾರೆ ಎಂದರು.
ಇನ್ನೂ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ತಪ್ಪಿತಸ್ಥರು ಅಂತ ಎಲ್ಲಿಯೂ ಕಂಡು ಬಂದಿಲ್ಲ. ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಸ್ಥಿರವಾಗುತ್ತಿದೆ. ವಿಪಕ್ಷಗಳನ್ನು ನಿಯಂತ್ರಣದಲ್ಲಿಡಬೇಕೆಂದು ಈ ರೀತಿ ಕೇಂದ್ರದ ಸಂಸ್ಥೆಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಗುಡುಗಿದ್ರು.
ಇನ್ನೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಖಾಲಿ ಇಲ್ಲ. ದಿನೇಶ್ ಗುಂಡೂರಾವ್ ನಮ್ಮ ಅಧ್ಯಕ್ಷರಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಹೈ ಕಮಾಂಡ್ ಸೂಚನೆಯನ್ನು ನೀಡಿಲ್ಲ. ಇದು ಕೇವಲ ಮಾಧ್ಯಮದ ಸೃಷ್ಟಿ ಎಂದರು.